More

    VIDEO| ಪಾಕ್​ ಪರ ಘೋಷಣೆ ಕೂಗಿದ ಮೂವರು ಕಾಶ್ಮೀರಿ ವಿದ್ಯಾರ್ಥಿಗಳ ಬಂಧನ: ವಿಡಿಯೋ ವೈರಲ್​, ವ್ಯಾಪಕ ಆಕ್ರೋಶ

    ಹುಬ್ಬಳ್ಳಿ: ಫೆ.14ರಂದು ನಡೆದ ಪುಲ್ವಾಮಾ ದಾಳಿಗೆ ಒಂದು ವರ್ಷ ಕಳೆದ ಹಿನ್ನೆಲೆಯಲ್ಲಿ ದೇಶದ ಜನತೆ ಹುತಾತ್ಮ ಯೋಧರ ಸ್ಮರಣೆ ಮಾಡುತ್ತಿರುವ ಸಂದರ್ಭದಲ್ಲಿ ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿರುವ ಕೆಎಲ್ಇ ಇಂಜಿನಿಯರಿಂಗ್ ಕಾಲೇಜಿನ ಕಾಶ್ಮೀರ ಮೂಲದ ವಿದ್ಯಾರ್ಥಿಗಳು ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿ ವಿಡಿಯೋವೊಂದನ್ನು ಹರಿ ಬಿಟ್ಟಿರುವ ಘಟನೆ ಬೆಳಕಿಗೆ ಬಂದಿದ್ದು, ಮೂವರನ್ನು ಬಂಧಿಸಲಾಗಿದೆ.

    ಬಂಧಿತರನ್ನು ಅಮೀರ್, ಬಾಸೀತ್, ತಾಲೀಬ್ ಎಂದು ಗುರುತಿಸಲಾಗಿದೆ. ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಸರ್ಕಾರಿ ಕೋಟಾದಲ್ಲಿ ಕಾಲೇಜಿಗೆ ದಾಖಲಾಗಿದ್ದ ಮೂವರು ಕಾಶ್ಮೀರ ವಿದ್ಯಾರ್ಥಿಗಳು ಸೆಲ್ಫಿ ವಿಡಿಯೋದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾರೆ. ಮೂವರು ಸಿವಿಲ್ ವಿಭಾಗದಲ್ಲಿ ಓದುತ್ತಿರುವ ವಿದ್ಯಾರ್ಥಿಗಳಾಗಿದ್ದಾರೆ. ಸದ್ಯ ಅವರನ್ನು ಪೊಲೀಸರು ಬಂಧಿಸಿದ್ದಾರೆ.

    ಇದಕ್ಕೂ ಮುನ್ನ ಕಾಲೇಜಿಗೆ ಭೇಟಿ ನೀಡಿದ ಭಜರಂಗದಳದ ಕಾರ್ಯಕರ್ತರು, ಕೂಡಲೇ ವಿದ್ಯಾರ್ಥಿಗಳ ವಿರುದ್ಧ ದೇಶ ದ್ರೋಹದ ಹಿನ್ನಲೆಯಲ್ಲಿ ಕಾನೂನು ಕ್ರಮ ಜರುಗಿಸಬೇಕು ಎಂದು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

    ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಕಾಲೇಜು ಪ್ರಾಂಶುಪಾಲರಾದ ಬಸವರಾಜ ಅನಾಮಿ, ಪೊಲೀಸ್​ ಇಲಾಖೆಗೆ ಮಾಹಿತಿ ನೀಡಿದ್ದೇವೆ ವಿದ್ಯಾರ್ಥಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದರು. ಈ ಪ್ರಕರಣ ವಿರುದ್ಧ ಎಲ್ಲೆಡೆ ಆಕ್ರೋ ವ್ಯಕ್ತವಾಗುತ್ತಿದೆ. (ದಿಗ್ವಿಜಯ ನ್ಯೂಸ್​)

    ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ವಿದ್ಯಾರ್ಥಿಗಳು ಪೊಲೀಸರ ವಶಕ್ಕೆ

    ಪಾಕಿಸ್ತಾನ ಜಿಂದಾಬಾದ್, ಆಜಾದ್ ಕಾಶ್ಮೀರ್ ಘೋಷಣೆ ಕೂಗಿದ ವಿದ್ಯಾರ್ಥಿಗಳು. ಅಮೀರ್, ಬಸೀರ್ ಹಾಗೂ ತಾಲೀಬ್ ಎಂಬ ಕಾಶ್ಮೀರ ಮೂಲದ ವಿದ್ಯಾರ್ಥಿಗಳು ದೇಶದ್ರೋಹಿ ಘೋಷಣೆ ಕೂಗಿ ವಿಡಿಯೊ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಟ್ಟಿದ್ದಾರೆ. ಇವರು ಹುಬ್ಬಳ್ಳಿಯ ಖಾಸಗಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು, ಪೊಲೀಸರು ಇವರನ್ನು ವಶಕ್ಕೆ ಪಡೆದಿದ್ದಾರೆ.ನಿಮ್ಮ ಊರಿನ ಸುದ್ದಿಗಳನ್ನೂ ವರದಿ ಮಾಡಬೇಕೆ? ಡೌನ್’ಲೋಡ್ ಮಾಡಿಕೊಳ್ಳಿ ಪವರ್ ನ್ಯೂಸ್https://pwnz.co/9KPoKEF053ಸುದ್ದಿ: ಹರ್ಷ ಕುಲಕರ್ಣಿ, ಹುಬ್ಬಳ್ಳಿ

    PowerNewz ಅವರಿಂದ ಈ ದಿನದಂದು ಪೋಸ್ಟ್ ಮಾಡಲಾಗಿದೆ ಶನಿವಾರ, ಫೆಬ್ರವರಿ 15, 2020

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts