ಪಟಾಕಿ ತಯಾರಿ ಘಟಕ ಸ್ಫೋಟಿಸಿ ಮೂವರು ಮೃತ್ಯು

ಬೆಳ್ತಂಗಡಿ: ವೇಣೂರು ಪೊಲೀಸ್ ಠಾಣೆ ವ್ಯಾಪ್ತಿಯ ಗೋಳಿಯಂಗಡಿ ಸಮೀಪದ ಕಡ್ತ್ಯಾರು ಸಮೀಪ ಸುಡುಮದ್ದು ತಯಾರಿಕಾ ಘಟಕದಲ್ಲಿ ಸಂಜೆ 5 ಗಂಟೆಗೆ ಸ್ಫೋಟ ಸಂಭವಿಸಿ ಮೂವರು ಸ್ಥಳದಲ್ಲೆ ಛಿದ್ರವಾಗಿದ್ದಾರೆ.

ಕುಚ್ಚೋಡಿ ಸಮೀಪದ ನಿವಾಸಿ ಬಶೀರ್ ಎಂಬುವರ ಜಮೀನಿನಲ್ಲಿ ಪಟಾಕಿ ತಯಾರಿಸುತ್ತಿದ್ದರು. ಅಲ್ಲಿ ಒಟ್ಟು 9 ಮಂದಿ ಕೂಲಿ ಕಾರ್ಮಿಕರು ಸ್ಫೋಟಕ ತಯಾರಿಸುತ್ತಿದ್ದರು.

ತ್ರಿಶೂರಿನ ವರ್ಗೀಸ್, ಹಾಸನ ಅಮಖನಾಯಕನಹಳ್ಳಿಯ ಚೇತನ್, ಕೇರಳದ ಸ್ವಾಮಿ ಮೃತರು. ಹಾಸನದ ದಿನೇಶ, ಕಿರಣ, ಅರಸೀಕೆರೆಯ ಕುಮಾರ, ಚಿಕ್ಕಮಾರಹಳ್ಳಿಯ ಕಲ್ಲೇಶ, ಕೇರಳದ ಪ್ರೇಮ್ ಹಾಗೂ ಕೇಶವ ಕೆಲಸ ನಿರ್ವಹಿಸುತ್ತಿದ್ದರು. ಮೃತಪಟ್ಟ ಮೂವರು ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟಕ ತಯಾರಿಸುತ್ತಿದ್ದರು. ಈ ಪೈಕಿ ಓರ್ವನ ಮೃತದೇಹ ದೊರೆತಿದ್ದು, ಇನ್ನಿಬ್ಬರ ದೇಹ ಸ್ಫೋಟದ ಸುತ್ತ ನೂರು ಮೀಟರ್ ವ್ಯಾಪ್ತಿಯಲ್ಲಿ ಛಿದ್ರವಾಗಿ ಬಿದ್ದಿದೆ.

ಸ್ಥಳಕ್ಕೆ ಬೆಳ್ತಂಗಡಿ ಅಗ್ನಿಶಾಮಕ ಸಿಬ್ಬಂದಿ ತಕ್ಷಣ ಬೆಂಕಿ ನಂದಿಸಿ ಅರೆಜೀವಾವಸ್ಥೆಯಲ್ಲಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಿದರೂ, ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸ್ಥಳದಲ್ಲಿ ಶೆಡ್ ಸಂಪೂರ್ಣ ಧ್ವಂಸವಾಗಿದ್ದು, ಅದರ ಸದ್ದು 4 ಕಿ.ಮೀ. ವ್ಯಾಪ್ತಿಯಷ್ಟು ದೂರಕ್ಕೆ ಕೇಳಿಸಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಸ್ಥಳಕ್ಕೆ ಡಿವೈಎಸ್‌ಪಿ ವಿಜಯ ಪ್ರಸಾದ್ ಸಹಿತ ವೇಣೂರು ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ. ಎಸ್‌ಪಿ ರಿಷ್ಯಂತ್ ಭೇಟಿ ನೀಡಲಿದ್ದಾರೆ.

Share This Article

ಒಂದು ಬಾರಿ ಇದನ್ನು ಕುಡಿದರೆ ಸಾಕು ನಿಮ್ಮ ಹೊಟ್ಟೆ ಫುಲ್​ ಕ್ಲೀನ್ ಆಗಿಬಿಡುತ್ತೆ! Stomach problems

ತಿಂದ ಆಹಾರ ಸರಿಯಾಗಿ ಜೀರ್ಣವಾಗದಿದ್ದರೆ ಆ ನೋವು ( Stomach problems ) ಅಥವಾ ಕಿರಿಕಿರಿ…

Health Tips : ಸಕ್ಕರೆ ಕಾಯಿಲೆಯಿಂದ ಬಳಲುತ್ತೀದ್ದೀರಾ? ಬೆಳ್ಳಂಬೆಳಗ್ಗೆ ಕರಿಬೇವಿನ ಎಲೆಯ ನೀರನ್ನು ಕುಡಿಯಿರಿ ಸಾಕು

ಬೆಂಗಳೂರು: ಕರಿಬೇವು ಕೇವಲ ಬೆಳಗಿನ ತಿಂಡಿಗೆ ರುಚಿ ಕೊಡಲು ಒಗ್ಗರಣೆಗೆ ಮಾತ್ರ ಮೀಸಲಾಗಿಲ್ಲ. ಕರಿಬೇವಿನ ಎಲೆಗಳು…

ಮನೆಯಲ್ಲೇ ತಯಾರಿಸಿಕೊಳ್ಳಿ ಕೂದಲು ಸಂರಕ್ಷಣೆಯ ಶುದ್ಧ ತೈಲ

ಸದೃಢವಾದ, ಹೊಳೆಯುವ, ನೀಳ ಕೂದಲು ಬೇಕೆಂಬ ಆಸೆ ತುಂಬಾ ಜನರಿಗೆ ಇದ್ದೇ ಇರುತ್ತದೆ. ಜೊತೆಗೆ ಕೂದಲು…