ಬೆಂಗಳೂರು: ಲಾಂಗ್ಡ್ರೈವ್ ಹೋಗಿದ್ದ ಮೂವರು ವಿದ್ಯಾರ್ಥಿಗಳು ಹಿಟ್ ಆ್ಯಂಡ್ ರನ್ಗೆ ಬಲಿಯಾಗಿರುವ ಘಟನೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರುವ ಚಿಕ್ಕಜಾಲದಲ್ಲಿ ನಡೆದಿದೆ.
ಮೃತರನ್ನು ರೋಹಿತ್(22), ಸುಚಿತ್(22), ಹರ್ಷ(22) ಎಂದು ಗುರುತಿಸಲಾಗಿದ್ದು, ಲಾಂಗ್ ಡ್ರೈವ್ ಹೋಗಿದ್ದಾಗ ಅಪರಿಚಿತ ವಾಹನ ಡಿಕ್ಕಿಯಾಗಿ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ಮೂವರು GKVKಯಲ್ಲಿ ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದರು ಎಂದು ವರದಿಯಾಗಿದೆ.
ಅಪಘಾತದ ಭೀಕರತೆಗೆ ಹೆದ್ದಾರಿಯಲ್ಲಿ ನಜ್ಜು ಗುಜ್ಜಾದ ಸ್ಥಿತಿಯಲ್ಲಿ ಮೃತ ದೇಹಗಳು ಚಲ್ಲಾಪಿಲ್ಲಿಯಾಗಿವೆ. ಅಪಘಾತದ ನಂತರ ವಾಹನ ಸಮೇತ ಚಾಲಕ ಪರಾರಿಯಾಗಿದ್ದು, ಅಂಬೇಡ್ಕರ್ ಆಸ್ಪತ್ರೆ ಶವಾಗಾರದಲ್ಲಿ ಇರಿಸಲಾಗಿದೆ. ಚಿಕ್ಕಜಾಲ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನೆಡೆಸುತ್ತಿದ್ದಾರೆ.