ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್‌ ಡಿಕ್ಕಿಯಾಗಿ ಮಹಿಳೆ ಸೇರಿ ಮೂವರ ದುರ್ಮರಣ

ಹಾಸನ: ನಿಂತಿದ್ದ ಟ್ರ್ಯಾಕ್ಟರ್​ಗೆ ಬೈಕ್ ಡಿಕ್ಕಿಯಾದ ಪರಿಣಾಮವಾಗಿ ಮಹಿಳೆ ಸೇರಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.

ಅರಕಲಗೂಡು ತಾಲೂಕಿನ ಕಾತ್ಯಾಲು ಸಮೀಪ ಘಟನೆ ನಡೆದಿದ್ದು, ಬೈಕ್​ನಲ್ಲಿದ್ದ ಓರ್ವ ಮಹಿಳೆ, ಅಭಿ(25) ಸೇರಿದಂತೆ ಮೂವರು ದುರ್ಮರಣಕ್ಕೀಡಾಗಿದ್ದಾರೆ.

ಸ್ಥಳಕ್ಕೆ ಕೊಣನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದಾರೆ. (ದಿಗ್ವಿಜಯ ನ್ಯೂಸ್)

Leave a Reply

Your email address will not be published. Required fields are marked *