ಮೃತದೇಹ ಸಾಗಿಸುತ್ತಿದ್ದ ಕಾರು ಪಲ್ಟಿ; ಮೂವರು ಸಾವು

ಚಿತ್ರದುರ್ಗ: ಶವವನ್ನು ಸಾಗಿಸುತ್ತಿದ್ದ ಕಾರಿನ ಟೈರ್​ ಸ್ಫೋಟಗೊಂಡ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕಿನ ರಾಂಪುರದಲ್ಲಿ ನಡೆದಿದೆ. ವೃದ್ಧೆಯೊಬ್ಬರ ಮೃತದೇಹವನ್ನು ಬೆಂಗಳೂರಿನಿಂದ ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲ್ಲೂಕಿಗೆ ಸಾಗಿಸುತ್ತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ದುರ್ಘಟನೆ ಸಂಭವಿಸಿದ್ದು, ಮೂವರು ಮೃತಪಟ್ಟಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ವೃದ್ಧೆಯೊಬ್ಬರ ಶವ ಸಾಗಿಸುತ್ತಿದ್ದ ವೇಳೆ ಮೊಳಕಾಲ್ಮೂರು ತಾಲ್ಲೂಕಿನ ರಾಂಪುರ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ಟೈರ್​ ಸ್ಫೋಟಗೊಂಡು ಕಾರು ಪಲ್ಟಿಯಾದ … Continue reading ಮೃತದೇಹ ಸಾಗಿಸುತ್ತಿದ್ದ ಕಾರು ಪಲ್ಟಿ; ಮೂವರು ಸಾವು