

Building collapses: ರಾಷ್ಟ್ರ ರಾಜಧಾನಿ ದೆಹಲಿಯ ಮಧ್ಯ ಭಾಗ ದರಿಯಾಗಂಜ್ನ ಸದ್ಭಾವನ ಪಾರ್ಕ್ ಬಳಿ ಕಟ್ಟಡವೊಂದು ಕುಸಿದು ಸ್ಥಳದಲ್ಲೇ ಮೂವರು ಮೃತಪಟ್ಟಿದ್ದು, ಹಲವರುವ ಅವಶೇಷಗಳ ಅಡಿ ಸಿಲುಕಿ ಗಾಯಗೊಂಡಿದ್ದಾರೆ ಎಂದು ಬುಧವಾರ (ಆಗಸ್ಟ್ 20) ವರದಿಯಾಗಿದೆ.
ಘಟನೆ ಕುರಿತು ಮಾಹಿತಿ ನೀಡಿರುವ ಡಿಎಫ್ಎಸ್ ಅಧಿಕಾರಿ, ಘಟನೆಯ ಬಗ್ಗೆ ಮಧ್ಯಾಹ್ನ 12.14 ಕ್ಕೆ ಮಾಹಿತಿ ಸಿಕ್ಕಿದ್ದು, ನಾಲ್ಕು ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ. ನೆಲ ಮತ್ತು ಎರಡು ಮಹಡಿಗಳನ್ನು ಒಳಗೊಂಡ ಕಟ್ಟಡ ಕುಸಿದಿದೆ. ಅವಶೇಷಗಳ ಅಡಿ ಸಿಲುಕಿದ್ದ ಮೂವರನ್ನು ರಕ್ಷಿಸಿ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳದಲ್ಲಿ ಇನ್ನು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಹೇಳಿದ್ದಾರೆ.
ಕಟ್ಟಡ ಕುಸಿತಕ್ಕೆ ಕಾರಣ ತಿಳಿದು ಬಂದಿಲ್ಲ, ಮೂವರು ಮೃತದೇಹಗಳನ್ನು ಎಲ್ಎನ್ಜೆಪಿ ಆಸ್ಪತ್ರೆಗೆ ರವಾನಿಸಲಾಗಿದೆ. ಸತ್ಯಾಸತ್ಯಗಳನ್ನು ಪರಿಶೀಲಿಸಿದ ಬಳಿಕ ಕಾನೂನು ಕ್ರಮಕೈಗೊಳ್ಳುತ್ತೇವೆ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ. (ಏಜೆನ್ಸೀಸ್)