

ಭೋಪಾಲ್: 400 ಕೆವಿ (400 KV) ಟ್ರಾನ್ಸ್ಮಿಷನ್ ಲೈನ್ ಕಂಬ ಕುಸಿದ ಪರಿಣಾಮ ಮೂವರು ಕಾರ್ಮಿಕರು ಮೃತಪಟ್ಟು, ಆರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಸಿಧಿಯಲ್ಲಿ ನಡೆದಿದೆ.
400 ಕೆವಿ (400 KV) ಮಾರ್ಗದಲ್ಲಿ ದುರಸ್ತಿ ಕಾರ್ಯ ಕೈಗೊಂಡಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಗಾಯಾಳುಗಳ ಮೇಲೆ ನಿಗಾ ವಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ಬಗ್ಗೆ ಮಾತನಾಡಿರುವ ಸಿಧಿ ಪೊಲೀಸ್ ವರಿಷ್ಠಾಧಿಕಾರಿ ರವೀಂದ್ರ ವರ್ಮಾ, ಕೂಲಿ ಕಾರ್ಮಿಕರು ಹಳೆಯ ಟವರ್ಗಳನ್ನು ಚೇಂಜ್ ಮಾಡುತ್ತಿದ್ದಾಗ ಘಟನೆ ನಡೆದಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಓರ್ವ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ರೇವಾದಲ್ಲಿರುವ ಸಂಜಯ್ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯದ ಮೇಲೆ ನಿಗಾ ವಹಿಸಲಾಗಿದೆ ಎಂದು ತಿಳಿಸಿದ್ದಾರೆ.