ಎರಡು ಕಾರುಗಳ ನಡುವೆ ಡಿಕ್ಕಿ; ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ದುರ್ಮರಣ

car accident
Published on

ರಾಮನಗರ: ಎರಡು ಕಾರುಗಳ ನಡುವೆ ಡಿಕ್ಕಿಯಾಗಿದ್ದು, ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ.

ಇನೋವಾ ಹಾಗೂ ಆಲ್ಟೊ ಕಾರು ನಡುವೆ ಡಿಕ್ಕಿಯಾಗಿದೆ. ಮೂವರು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಮೃತರೆಲ್ಲರು ಒಂದೇ ಕುಟುಂಬದವರು ಎನ್ನಲಾಗಿದೆ. ಈ ಭೀಕರ ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಚನ್ನಪಟ್ಟಣ ಲಂಬಾಣಿ ತಾಂಡ್ಯ ಬಳಿ ಅಪಘಾತ ಸಂಭವಿಸಿದ್ದು, ಗಾಯಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಚನ್ನಪಟ್ಟಣ ಸಂಚಾರಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net