ಇಬ್ಬರು ಬಾಲಕಿಯರ ಮೇಲೆ ಬಾಲಕರಿಂದ ಸಾಮೂಹಿಕ ಅತ್ಯಾಚಾರ, 9 ಮಂದಿ ಪೊಲೀಸ್ ವಶಕ್ಕೆ

rape
Published on

ಚೆನ್ನೈ: ಇಬ್ಬರು ಬಾಲಕಿಯರ ಮೇಲೆ ಅತ್ಯಾಚಾರ ಮತ್ತು ಗರ್ಭಪಾತ ಮಾಡಿದ ಆರೋಪದ ಮೇಲೆ ಮೂವರು ಅಪ್ರಾಪ್ತ ಬಾಲಕರು ಸೇರಿದಂತೆ ಒಂಬತ್ತು ಮಂದಿಯನ್ನು ಬಂಧಿಸಿದ ಘಟನೆ ತಮಿಳುನಾಡಿನ ತಿರುಪ್ಪೂರ್ ಜಿಲ್ಲೆಯಲ್ಲಿ ನಡೆದಿದೆ.

ಅತ್ಯಾಚಾರಕ್ಕೆ ಒಳಗಾದ ಬಾಲಕಿಯರು 13 ಮತ್ತು 17 ವರ್ಷದವರಾಗಿದ್ದಾರೆ. 17 ವರ್ಷದ ಬಾಲಕಿ ಗರ್ಭಿಣಿಯಾದ ಬಳಿಕ ವಿಷಯ ಬೆಳಕಿಗೆ ಬಂದಿದೆ.

ಬಾಲಕಿಯ ಪೋಷಕರು ನೀಡಿದ ದೂರಿನ ಮೇರೆಗೆ ಉಡುಮಲಪೇಟೆಯ ಮಹಿಳಾ ಪೊಲೀಸರು ಜೈಕಲೀಶ್ವರನ್ (19), ಮದನಕುಮಾರ್ (19), ಭರಣಿಕುಮಾರ್ (21), ಪ್ರಕಾಶ್ (24), ನಂದಗೋಪಾಲ್ (19), ಭಾವ ಭಾರತಿ (22) ಮತ್ತು 14 ವರ್ಷದ ವಿರುದ್ಧ ವಿರುದ್ಧ ಪೋಕ್ಸೋ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಉಡುಮಲ್‌ಪೇಟೆಯಲ್ಲಿ ವಶಕ್ಕೆ ಪಡೆದಿದ್ದಾರೆ.

17ರ ಬಾಲಕಿ ಚಿಕ್ಕ ವಯಸ್ಸಿನಲ್ಲೇ ತನ್ನ ಪೋಷಕರನ್ನು ಕಳೆದುಕೊಂಡು ಚಿಕ್ಕಮ್ಮನ ಮನೆಯಲ್ಲಿ ವಾಸವಿದ್ದಳು. ಶಾಲೆಯನ್ನು ತೊರೆದು ಕೆಲಸಕ್ಕಾಗಿ ಹುಡುಕಾಡುತ್ತಿದ್ದಾಗ 15 ವರ್ಷದ ಬಾಲಕ ಆಕೆಯೊಂದಿಗೆ ಸ್ನೇಹವನ್ನು ಬೆಳೆಸಿದ್ದಾನೆ. ಬಳಿಕ ಕೆಲಸ ಕೊಡಿಸುವ ನೆಪದಲ್ಲಿ ಆಕೆಯನ್ನು ತನ್ನ ಸ್ನೇಹಿತರ ಬಳಿ ಕರೆದೊಯ್ದು ಸ್ನೇಹಿತರೊಂದಿಗೆ ಸೇರಿಕೊಂಡು ಅತ್ಯಾಚಾರವೆಸಗಿದ್ದಾರೆ ಎನ್ನಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net