ಅಪಘಾತದಲ್ಲಿ ಮೂರು ತಿಂಗಳ ಮಗು ಸೇರಿ ಮೂವರ ದುರ್ಮರಣ

ಹಾಸನ: ಕೆಎಸ್​ಆರ್​ಟಿಸಿ ಬಸ್​ ಮತ್ತು ಆಟೋ ನಡುವೆ ಡಿಕ್ಕಿಯಾದ ಪರಿಣಾಮ ಮೂರು ತಿಂಗಳ ಹಸುಗೂಸು ಸೇರಿ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಜಿಲ್ಲೆಯ ಬೇಲೂರು ತಾಲೂಕಿನ ಅಂದಲೆ ಗ್ರಾಮದ ಬಳಿ ನಡೆದ ಘಟನೆಯಲ್ಲಿ ಲಕ್ಷ್ಮಮ್ಮ (55), ಚಂದ್ರಕಲಾ (32) ಮತ್ತು ಮೂರು ತಿಂಗಳ ಕಂದಮ್ಮ ಸಾವಿಗೆ ಶರಣಾಗಿದ್ದಾರೆ. ಅಪಘಾತದಲ್ಲಿ ನಾಲ್ವರಿಗೆ ಗಂಭೀರ ಗಾಯವಾಗಿದ್ದು, ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.

ಹಳೆಬೀಡು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್​)