More

    ರಾಮೇಶ್ವರಂ ಕೆಫೆ ಬ್ಲಾಸ್ಟ್​ ಪ್ರಕರಣ; ಮೂವರು ಶಂಕಿತರನ್ನು ವಶಕ್ಕೆ ಪಡೆದ NIA

    ಬೆಂಗಳೂರು: ನಗರದ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಮಾರ್ಚ್​ 01ರಂದು ಸಂಭವಿಸಿದ್ದ ಸ್ಫೋಟಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ರಾಷ್ಟ್ರೀಯ ತನಿಖಾ ದಳ (NIA) ಮೂವರು ಶಂಕಿತರನ್ನು ವಶಕ್ಕೆ ಪಡೆದಿದೆ.

    ಸಂಚು ರೂಪಿಸಿದ್ದ ಅನುಮಾನದ ಮೇರೆಗೆ ಶಂಕಿತ ಉಗ್ರ ಮಿನಾಜ್ ಅಲಿಯಾಸ್ ಸುಲೇಮಾನ್‌ನನ್ನು (26) ರಾಷ್ಟ್ರೀಯ ತನಿಖಾ ದಳ (NIA) ಈಗಾಗಲೇ ವಶಕ್ಕೆ ಪಡೆದಿದ್ದು, ಈಗ ಮತ್ತೆ ಮೂವರು ಶಂಕಿತರನ್ನು ವಶಕ್ಕೆ ಪಡೆದಿದೆ.

    ಇದನ್ನೂ ಓದಿ: ಲೋಕಸಭೆ ಚುನಾವಣೆ| ಟೈಮ್ಸ್​ ನೌ-ಇಟಿಜಿ ಸಮೀಕ್ಷೆ ವರದಿ ಪ್ರಕಟ; ಬಿಜೆಪಿ ಮೇಲುಗೈ

    ಶಂಕಿತರು ಮತ್ತೊಂದು ಸ್ಫೋಟಕ್ಕೆ ಸಂಚು ರೂಪಿಸಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ತನಿಖಾ ಸಂಸ್ಥೆಗಳು, ರಾಜ್ಯದಲ್ಲಿ ಕಟ್ಟೆಚ್ಚರ ವಹಿಸುವಂತೆ ಪೊಲೀಸರಿಗೆ ಮಾಹಿತಿ ರವಾನಿಸಿದ್ದಾರೆ. ಇದೇ ವೇಳೆ ನ್ಯಾಯಾಲಯದ ಆದೇಶದ ಮೇರೆಗೆ ಬಳ್ಳಾರಿಯ ಸೈಯದ್ ಸಮೀರ್, ಮುಂಬೈ ನ ಅನಾಸ್ ಇಕ್ಬಾಲ್ ಶೇಖ್ ಹಾಗೂ ದೆಹಲಿಯ ಶಯಾನ್ ರಹಮಾನ್ ಅಲಿಯಾಸ್ ಹುಸೈನ್​ನನ್ನು ವಶಕ್ಕೆ ಪಡೆದಿದೆ.

    ವಶಕ್ಕೆ ಪಡೆದಿರುವ ಶಂಕಿತ ಉಗ್ರರು ISIS ಜೊತೆ ನಂಟು ಹೊಂದಿದ್ದಾರೆ. ದೇಶದಲ್ಲಿ ವಿದ್ವಂಸಕ ಕೃತ್ಯ ಎಸಗಲು ಸಂಚು ರೂಪಿಸುತ್ತಿದ್ದರು. ಈ ಬಗ್ಗೆ ಮಾಹಿತಿ ಕಲೆಹಾಕಿದ್ದ ಎನ್ಐಎ ಅಧಿಕಾರಿಗಳು 2023ರ ಡಿಸೆಂಬರ್ 18ರಂದು ಮಿನಾಜ್ ಹಾಗೂ ಇತರರನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts