26.8 C
Bangalore
Friday, December 13, 2019

ಮತ್ತೆ ಮೂವರ ಬಂಧನ

Latest News

ಶಬರಿಮಲೆ ವಿಚಾರದಲ್ಲಿ ಸದ್ಯ ಯಾವುದೇ ಆದೇಶವನ್ನು ಹೊರಡಿಸಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್​

ನವದೆಹಲಿ: ಪೊಲೀಸ್​ ರಕ್ಷಣೆಯೊಂದಿಗೆ ಶಬರಿಮಲೆ ಅಯ್ಯಪ್ಪನ ಸನ್ನಿಧಿಯನ್ನು ಮಹಿಳೆಯರು ಸುರಕ್ಷಿತವಾಗಿ ಪ್ರವೇಶಿಸಲು ಕೇರಳ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಇಬ್ಬರು ಮಹಿಳಾ ಕಾರ್ಯಕರ್ತರು ಸಲ್ಲಿಸಿದ್ದ...

ತುಮಕೂರು ಸ್ಮಾರ್ಟ್‌ಸಿಟಿ ಜೆಎಂಡಿ ಎತ್ತಂಗಡಿ!

ತುಮಕೂರು: ಸ್ಮಾರ್ಟ್‌ಸಿಟಿ ಲಿಮಿಟೆಡ್ ಜಂಟಿ ವ್ಯವಸ್ಥಾಪಕ ನಿರ್ದೇಶಕ ವಿ.ಅಜಯ್ ಅವರನ್ನು ಎತ್ತಂಗಡಿ ಮಾಡಲಾಗಿದೆ. 3 ತಿಂಗಳ ಹಿಂದೇ ಸ್ಮಾರ್ಟ್‌ಸಿಟಿ ಎಂಡಿ ಜವಾಬ್ದಾರಿ ಹೊಣೆ ಹೊತ್ತಿದ್ದ ಮಹಾನಗರ...

ಕುಪ್ಪೂರು ಶ್ರೀ ಮರುಳಸಿದ್ದೇಶ್ವರ ಜಾತ್ರೆಗೆ ಸಿಎಂ ಯಡಿಯೂರಪ್ಪ ಚಾಲನೆ

ಚಿಕ್ಕನಾಯಕನಹಳ್ಳಿ: ಸುಕ್ಷೇತ್ರ ಕುಪ್ಪೂರು ಶ್ರೀಮರುಳಸಿದ್ದೇಶ್ವರ ಗದ್ದುಗೆ ಜಾತ್ರೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಗುರುವಾರ ಚಾಲನೆ ನೀಡಿದ್ದು, ನಾಡಿನ ವಿವಿಧೆಡೆಯಿಂದ ಸಾವಿರಾರು ಭಕ್ತರು ಜಾತ್ರೆಗೆ ಬಂದಿದ್ದರು. ಶ್ರೀಮಠದ ಆವರಣದಲ್ಲಿ ಗುರುವಾರ...

ಬಲರಾಮ್ ಕುಣಿಗಲ್ ಬಿಜೆಪಿ ಅಧ್ಯಕ್ಷ

ಕುಣಿಗಲ್: ತಾಲೂಕು ಬಿಜೆಪಿ ನೂತನ ಅಧ್ಯಕ್ಷರಾಗಿ ತಾಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಎಸ್.ಬಲರಾಮ್ ಗುರುವಾರ ಅವಿರೋಧ ಆಯ್ಕೆಯಾದರು. ಪಟ್ಟಣದ ದಿಶಾ ಪಾರ್ಟಿ ಹಾಲ್‌ನಲ್ಲಿ ರಾಜ್ಯ ಬಿಜೆಪಿ...

ಭಾರತದ ಪ್ರಗತಿಗೆ ಬೇಕು ವೈಜ್ಞಾನಿಕ ಶಿಕ್ಷಣ: ಡಾ.ಡಿ.ವಿ.ಗೋಪಿನಾಥ್

ದಾವಣಗೆರೆ: ಭಾರತದ ಪ್ರಗತಿಗೆ ವೈಜ್ಞಾನಿಕ ಶಿಕ್ಷಣ ಅತ್ಯವಶ್ಯ ಎಂದು ಮುಂಬೈನ ಭಾಭಾ ಅಣು ಸಂಶೋಧನಾ ಕೇಂದ್ರದ ಜೀವ ವೈದ್ಯಕೀಯ ವಿಭಾಗದ ನಿವೃತ್ತ ನಿರ್ದೇಶಕ ಡಾ.ಡಿ.ವಿ.ಗೋಪಿನಾಥ್ ಹೇಳಿದರು. ಪಾರ್ವತಮ್ಮ...

ಪುತ್ತೂರು: ಪುತ್ತೂರಿನ ದಲಿತ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಘಟನೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿದ ಪ್ರಕರಣಕ್ಕೆ ಸಂಬಂಧಿಸಿ ನಗರ ಠಾಣೆ ಪೊಲೀಸರು ಮತ್ತೆ ಮೂವರನ್ನು ಶುಕ್ರವಾರ ಬಂಧಿಸಿದ್ದಾರೆ. ಪ್ರಕರಣದಲ್ಲಿ ಬಂಧಿತರ ಸಂಖ್ಯೆ 11ಕ್ಕೇರಿದೆ.

ಕಡಬ ತಾಲೂಕು ಕಾಮಣ ಗ್ರಾಮದ ಬೆಳಂದೂರು ನಿವಾಸಿ ಶೌಕತ್ ಆಲಿ(34), ಬೆಳಂದೂರು ದೇವಸ್ಯ ಮನೆ ನಿವಾಸಿ ನಜೀರ್ ಡಿ.(32), ಬೆಳಂದೂರು ಗ್ರಾಮದ ಪಲ್ಲತ್ತಾರ್ ನಿವಾಸಿ ಜಾಬಿರ್(26) ಬಂಧಿತರು.

ಇದೇ ಆರೋಪದಲ್ಲಿ ಈಗಾಗಲೇ ನ್ಯಾಯಾಂಗ ಬಂಧನದಲ್ಲಿರುವ ಕಬಕ ನಿವಾಸಿ ಚಂದ್ರಶೇಖರ ಮಯ್ಯ(49), ಮುರಳಿ ಪರ್ಲಡ್ಕ(29), ದೈಹಿಕ ಶಿಕ್ಷಣ ಶಿಕ್ಷಕ ಪೂವಪ್ಪ(26), ಶ್ರೇಯಾನ್ಸ್ ಕಡಬ ಪೇಟೆ(20), ಧ್ಯಾನ್ ಎ.ಎನ್ ಕೊಳ್ತಿಗೆ(18), ಅದ್ವಿತ್ ಕುಮಾರ್ ನಾಕ್ ಕಬಕ (19), ಪವನ್ ಕುಮಾರ್ ಆರ್ಯಾಪು(19), ಮೋಹಿತ್ ಪಿ.ಜಿ ಕಸಬಾ(18) ಎಂಬುವರು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಪುತ್ತೂರು ನ್ಯಾಯಾಲಯ ಶನಿವಾರಕ್ಕೆ ಮುಂದೂಡಿದೆ.

ವಿಡಿಯೋ ಶೇರ್ ಮಾಡಿದ ಆರೋಪದ ಮೇಲೆ ಪೊಲೀಸರು ವಶಕ್ಕೆ ಪಡೆದಿದ್ದ ಸುಳ್ಯ ಮತ್ತು ಬೆಳ್ಳಾರೆ ಪರಿಸರದ 7 ಮಂದಿಯನ್ನು ವಿಚಾರಣೆ ನಡೆಸಿ ಬಿಡುಗಡೆಗೊಳಿಸಿದ್ದಾರೆ. ಇಡೀ ಪ್ರಕರಣದಲ್ಲಿ ಐವರು ಅತ್ಯಾಚಾರ ಆರೋಪಿಗಳ ಸಹಿತ ಒಟ್ಟು 16 ಆರೋಪಿಗಳು ಬಂಧಿಸಲ್ಪಟ್ಟಿದ್ದಾರೆ.

ಪೊಲೀಸರಿಗೆ ಕೋರ್ಟ್ ಛೀಮಾರಿ: ಅತ್ಯಾಚಾರವೆಸಗಿದ ಐವರು ಆರೋಪಿಗಳನ್ನು ಗುರುವಾರ ನ್ಯಾಯಾಧೀಶರ ಎದುರು ಹಾಜರುಪಡಿಸುವ ವೇಳೆ ಕೋರ್ಟ್ ಪೊಲೀಸರಿಗೆ ಛೀಮಾರಿ ಹಾಕಿದೆ. ಇದೊಂದು ಗಂಭೀರ ಪ್ರಕರಣವಾಗಿದ್ದು, ಆರೋಪಿಗಳ ಮುಖ ಮುಚ್ಚದೆ ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ಅಲ್ಲದೆ ಫೋಟೋ ಮಾಧ್ಯಮಗಳಲ್ಲಿ ಬಂದಿರುವುದಕ್ಕೆ ಆಕ್ಷೇಪಿಸಲಾಯಿತು.

ಇನ್ನೊಂದು ವಿಡಿಯೋ ವೈರಲ್ ಕೇಸು ದಾಖಲಿಸಿದ ಪೊಲೀಸರು: ಯುವತಿಯೊಬ್ಬಳು ಅರೆಬೆತ್ತಲೆಯಾಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗುತ್ತಿದ್ದು, ನಗರ ಠಾಣೆ ಪೊಲೀಸರು ಸ್ವಯಂಪ್ರೇರಿತ ಕೇಸು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಯುವತಿ ಮೊಬೈಲ್ ಮುಖಾಂತರ ಯಾರಿಗೋ ವಿಡಿಯೋ ಕಾಲ್ ಮಾಡಿ, ವಸ್ತ್ರಗಳನ್ನು ತೆಗೆದು ಅರೆಬೆತ್ತಲೆ ಶರೀರವನ್ನು ಫೋನ್ ಸಂಪರ್ಕದಲ್ಲಿರುವ ವ್ಯಕ್ತಿಗೆ ಪ್ರದರ್ಶಿಸುತ್ತಿರುವ ದೃಶ್ಯ ವಿಡಿಯೋದಲ್ಲಿ ದಾಖಲಾಗಿದೆ. ಈ ವಿಡಿಯೋ ಮೊಬೈಲ್‌ಗಳಲ್ಲಿ ಸಾಮಾಜಿಕ ಜಾಲತಾಣ ಮೂಲಕ ಪ್ರಸಾರವಾಗಿದ್ದು, ಇದರಿಂದ ಸಾರ್ವಜನಿಕರ ಶಾಂತಿ, ನೆಮ್ಮದಿಗೆ ಭಂಗ ಉಂಟಾಗಿದೆ. ಮಹಿಳೆಯರ ಗೌರವಕ್ಕೆ ಚ್ಯುತಿ ಉಂಟಾಗಿದ್ದು, ವಿಡಿಯೋ ಮತ್ತು ಅದನ್ನು ಪ್ರಸಾರ ಮಾಡಿದ ಆರೋಪಿಗಳ ಬಗ್ಗೆ ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Stay connected

278,748FansLike
588FollowersFollow
626,000SubscribersSubscribe

ವಿಡಿಯೋ ನ್ಯೂಸ್

VIDEO| ಬರೋಬ್ಬರಿ 20 ಕೆ.ಜಿ. ತೂಕದ ಹೆಬ್ಬಾವು ಸೆರೆಹಿಡಿದ ಮಹಿಳೆ:...

ತಿರುವನಂತಪುರ: ಮಹಿಳೆಯೊಬ್ಬರು ಸುಮಾರು 20 ಕೆ.ಜಿ. ತೂಗುವ ಬೃಹದಾಕಾರದ ಹೆಬ್ಬಾವನ್ನು ಸೆರೆಹಿಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಮೆಚ್ಚುಗೆ ಮಹಾಪೂರ ಹರಿದುಬಂದಿದೆ. ವಿಡಿಯೋದಲ್ಲಿರುವ ಮಹಿಳೆಯನ್ನು ಕೊಚ್ಚಿ ಮೂಲದ ವನ್ಯಜೀವಿ ಸಂರಕ್ಷಕಿ...

ಅತ್ಯಾಚಾರ ಪ್ರಕರಣ ಕುರಿತು ರಾಹುಲ್​ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ಗದ್ದಲ:...

ನವದೆಹಲಿ: ಅತ್ಯಾಚಾರ ಪ್ರಕರಣ ಕುರಿತು ಗುರುವಾರ ಜಾರ್ಖಂಡ್​ ಸಮಾವೇಶದಲ್ಲಿ ಕಾಂಗ್ರೆಸ್​ ಮಾಜಿ ಅಧ್ಯಕ್ಷ ಹಾಗೂ ವಯನಾಡಿನ ಹಾಲಿ ಸಂಸದ ರಾಹುಲ್​ ಗಾಂಧಿ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ....

VIDEO: 8 ಅಡಿ ಉದ್ದದ ಹೆಬ್ಬಾವನ್ನು ರಕ್ಷಿಸಲು 40 ಅಡಿ...

ತ್ರಿಶೂರ್​: ಇಲ್ಲೋರ್ವ ಯುವಕ ಬಾವಿಯಲ್ಲಿ ಬಿದ್ದಿದ್ದ ಹೆಬ್ಬಾವನ್ನು ರಕ್ಷಿಸಲು ಹಗ್ಗದ ಮೂಲಕ ಕೆಳಗೆ ಇಳಿದು ಬಳಿಕ ಅಪಾಯಕ್ಕೆ ಸಿಲುಕಿದ ವಿಡಿಯೋವೊಂದು ವೈರಲ್​ ಆಗಿದೆ. ಈ ಘಟನೆ ನಡೆದಿದ್ದು ಕೇರಳದ ತ್ರಿಶೂಲ್​ನಲ್ಲಿ ಎನ್ನಲಾಗಿದೆ. ವಿಡಿಯೋದಲ್ಲಿ ಇರುವ...

VIDEO| ಲಕ್ಷ್ಯದ ಜೊತೆಯಲಿ ಅನಿರುದ್ಧ್; ಡೈಲಾಗ್​ ಟೀಸರ್​ ಬಿಡುಗಡೆ

ಬೆಂಗಳೂರು: ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಕನ್ನಡಿಗರ ಮನೆಮನ ಗೆದ್ದಿರುವ ನಟ ಅನಿರುದ್ಧ್ ಈಗ ‘ಲಕ್ಷ್ಯ’ಗೆ ಜತೆಯಾಗಿದ್ದಾರೆ. ಅಂದರೆ ‘ಲಕ್ಷ್ಯ’ ಸಿನಿಮಾದ ಡೈಲಾಗ್ ಟೀಸರ್ ಬಿಡುಗಡೆ ಮಾಡುವ ಮೂಲಕ ಅವರು ಚಿತ್ರತಂಡದ ಜತೆ...

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....