More

    ಮೂವರು ಪೆಡ್ಲರ್‌ಗಳು ಸಿಸಿಬಿ ಬಲೆಗೆ; 52 ಲಕ್ಷ ರೂ. ಮೌಲ್ಯದ ಡ್ರಗ್ಸ್ ಜಪ್ತಿ

    ಬೆಂಗಳೂರು: ಹೊಸ ವರ್ಷಾಚರಣೆ ಪಾರ್ಟಿಗೆ ಪೂರೈಕೆ ಮಾಡಲು ಸಜ್ಜಾಗಿದ್ದ ಎರಡು ಪ್ರತ್ಯೇಕ ಮಾದಕ ವಸ್ತು ಮಾರಾಟ ಜಾಲದ ಮೇಲೆ ದಾಳಿ ನಡೆಸಿ ವಿದೇಶಿ ಡ್ರಗ್ಸ್ ಪೆಡ್ಲರ್ ಸೇರಿ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

    ಆಫ್ರಿಕಾ ಮೂಲದ ಜೋಶು ನೆಲ್ಸನ್ ಕಾಲು (50), ಕೇರಳ ಮೂಲದ ಅಬ್ದುಲ್ ಅಹದ್ (42) ಹಾಗೂ ನಿಸಮ್ (38) ಬಂಧಿತರು. 52.78 ಲಕ್ಷ ರೂ. ಮೌಲ್ಯದ 86.89 ಗ್ರಾಂ ಎಂಡಿಎಂಎ ಕ್ರಿಸ್ಟೆಲ್, 100 ಎಲ್‌ಎಸ್‌ಡಿ ಸ್ಟ್ರಿಪ್ಸ್, 253 ಎಕ್ಸೆಟಿಸಿ ಪಿಲ್ಸ್, 2.5 ಗ್ರಾಂ ಕೊಕೇನ್, 3 ಮೊಬೈಲ್, ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನವನ್ನು ಜಪ್ತಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಬೇಗೂರಿನ ಹೊಂಗಸಂದ್ರದ ಅಯ್ಯಪ್ಪ ದೇವಸ್ಥಾನ ರಸ್ತೆಯ ಬಾಡಿಗೆ ಮನೆಯಲ್ಲಿ ವಿದೇಶಿ ಪ್ರಜೆಯು ಕಾಲೇಜು ವಿದ್ಯಾರ್ಥಿಗಳು, ಸಾಫ್ಟ್‌ವೇರ್ ಇಂಜಿನಿಯರ್‌ಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ ಜೋಶುನನ್ನು ಬಂಧಿಸಲಾಗಿದೆ. ಈತ ವರ್ಷದ ಹಿಂದೆ ಬಿಜಿನೆಸ್ ವೀಸಾ ಪಡೆದು ಭಾರತಕ್ಕೆ ಬಂದಿದ್ದು, 3 ತಿಂಗಳಿಂದ ನಗರದಲ್ಲಿ ನೆಲೆಸಿದ್ದ. ಈ ಸಂಬಂಧ ಬೇಗೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಕೋರಮಂಗಲ 7ನೇ ಬ್ಲಾಕ್‌ನ ಹೋಟೆಲ್‌ನಲ್ಲಿ ಇಬ್ಬರು ವ್ಯಕ್ತಿಗಳು ಮಾದಕ ವಸ್ತು ಮಾರಾಟಕ್ಕೆ ಯತ್ನಿಸುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಹೋಟೆಲ್‌ನ ರೂಮ್ ಮೇಲೆ ದಾಳಿ ಮಾಡಿ ಕೇರಳ ಮೂಲದ ಅಬ್ದುಲ್ ಅಹದ್ ಮತ್ತು ನಿಸಮ್ ಎಂಬುವರನ್ನು ಮಾಲು ಸಹಿತ ಬಂಧಿಸಲಾಗಿದೆ. ಕೋರಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts