ಅಪಘಾತದಲ್ಲಿ ಗಾಯಗೊಂಡವರನ್ನು ಕಾಪಾಡಲು ಹೋಗಿ ವಿದ್ಯುತ್​​​ಗೆ ಮೂವರು ಬಲಿ

ಮಂಡ್ಯ: ಅಪಘಾತದಲ್ಲಿ ಗಾಯಗೊಂಡವರನ್ನು ಕಾಪಾಡಲು ಹೋಗಿ ಮೂವರು ಪ್ರಾಣ ಕಳೆದುಕೊಂಡಿರುವ ಘಟನೆ ಜಿಲ್ಲೆಯ ಮದ್ದೂರು ತಾಲೂಕಿನ ಮಣಿಗೆರೆ ಗ್ರಾಮದ ಬಳಿ ನಡೆದಿದೆ.

ಮಣಿಗೆರೆಯ ದೇವರಾಜು(35), ಬಿದರಹೊಸಹಳ್ಳಿಯ ಪ್ರಸನ್ನ(50), ಪುಟ್ಟ (25) ಮೃತ ದುರ್ದೈವಿಗಳು.

ಬುಧವಾರ ತಡರಾತ್ರಿ ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್​​​ ಕಂಬಕ್ಕೆ ಡಿಕ್ಕಿಯಾಗಿದೆ. ಈ ವೇಳೆ ವಿದ್ಯುತ್​​​​ ತಂತಿ ತುಂಡಾಗಿದೆ. ಇದನ್ನು ಗಮನಿಸಿದ ಮೂವರು ಕಾರಿನಲ್ಲಿ ಗಾಯಗೊಂಡವರನ್ನು ಕಾಪಾಡಲುಮುಂದಾಗಿದ್ದಾರೆ. ಈ ವೇಳೆ ವಿದ್ಯುತ್​​​​ ತಂತಿಯನ್ನು ತುಳಿದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತರ ಕುಟುಂಬಸ್ಥರು ಹಾಗೂ ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದೆ.

ಕಾರಿನಲ್ಲಿದ್ದವರು ಪ್ರಾಣಾಪಾಯಾದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಕೆ.ಎಂ.ದೊಡ್ಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *