ಬೀದರ್: ರಾಜ್ಯದಲ್ಲಿ ಇಂದು ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಯುವ ಕಾಂಗ್ರೆಸ್ಗೆ ಸೇರಿದ ಜೀಪೊಂದು ಪಲ್ಟಿಯಾಗಿ ಒಬ್ಬರು ಸ್ಥಳದಲ್ಲೇ ಮೃತಪಟ್ಟು ಮೂವರು ಗಾಯಗೊಂಡ ಬೆನ್ನಿಗೆ ಮತ್ತೊಂದು ಅಪಘಾತ ಸಂಭವಿಸಿದೆ. ಇಲ್ಲಿ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಸಂತಪೂರ್ ಬಳಿ ಈ ಅಪಘಾತ ಸಂಭವಿಸಿದೆ. ಕ್ರೂಸರ್ ವಾಹನ ಮತ್ತು ಟಿಪ್ಪರ್ ಡಿಕ್ಕಿ ಹೊಡೆದು ಅಪಘಾತ ಉಂಟಾಗಿದ್ದು, ಕ್ರೂಸರ್ ಬಹುತೇಕ ಜಖಂಗೊಂಡಿದೆ. ಸಾವಿಗೀಡಾದ ಇಬ್ಬರೂ ಕ್ರೂಸರ್ನಲ್ಲಿದ್ದವರು.
ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಸಂತಪೂರ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಔರಾದ್ ತಾಲೂಕಿನ ಹೋಕ್ರಾಣ ಗ್ರಾಮದ ದೀಪಕ ಕಸ್ತೂರೆ (60), ಸತ್ಯವಾನ ದಬಾಕ (25) ಮೃತಪಟ್ಟವರು. ಮೃತಪಟ್ಟವರು ಹಾಗೂ ಗಾಯಾಳುಗಳ ಕುರಿತ ಖಚಿತ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.
ಯುವ ಕಾಂಗ್ರೆಸ್ ಜೀಪ್ ಪಲ್ಟಿ; ಒಬ್ಬ ಸ್ಥಳದಲ್ಲೇ ಸಾವು, ಮೂವರಿಗೆ ಗಾಯ..