ಸಾಲಬಾಧೆ ತಾಳಲಾರದೆ ಒಂದೇ ಕುಟುಂಬದ ಮೂವರು ಸಾವು

Three people from the same family end life because they couldnt bear the debt
Published on

ತುಮಕೂರು:  ಸಾಲಬಾಧೆ ತಾಳಲಾರದೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರಿನ ಪಂಡಿತನಹಳ್ಳಿ ರೈಲ್ವೆ ಹಳಿ ಬಳಿ ನಡೆದಿದೆ.

ಸಿದ್ದಗಂಗಯ್ಯ (62),ಸುನಂದಮ್ಮ, ಗೀತಾ ಆತ್ಮಹತ್ಯೆಗೆ ಶರಣಾದ ದುರ್ದೈವಿಗಳು. ರೈಲಿಗೆ ಸಿಲುಕಿ ತಂದೆ, ತಾಯಿ, ಮಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತರು ತುಮಕೂರಿನ ಮರಳೂರು ನಿವಾಸಿಯಾಗಿದ್ದಾರೆ.

ಕೆಇಬಿಯಲ್ಲಿ ಕೆಲಸ ಮಾಡುತ್ತಿದ್ದ ಸಿದ್ದಗಂಗಯ್ಯ ಕಳೆದ ಎರಡು ವರ್ಷಗಳ ಹಿಂದೆ ನಿವೃತ್ತಿ ಹೊಂದಿದ್ದರು. ಸಾಕಷ್ಟು ಸಾಲ ಮಾಡಿಕೊಂಡಿದ್ದ ಸಿದ್ದಗಂಗಯ್ಯ, ಬೆಂಗಳೂರಿನ ಮಲ್ಲೇಶ್ವರಂ ಬಳಿಯಿರುವ ಕೆಸಿ ಜನರಲ್ ಆಸ್ಪತ್ರೆ ಬಳಿ ಟೀ ಶಾಪ್ ಇಟ್ಟುಕೊಂಡಿದ್ದರು. ಇಂದು ಬೆಳಗ್ಗಿನ ಜಾವ ಆಟೋದಲ್ಲಿ ಬಂದು ಪಂಡಿತನಹಳ್ಳಿ ರೈಲ್ವೆ ಹಳಿ ಬಳಿ ಬಂದು ಸಿದ್ದಗಂಗಯ್ಯ ,ಸುನಂದಮ್ಮ, ಗೀತಾ ರೈಲಿಗೆ ಸಿಕ್ಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರೈಲು ಸಿಕ್ಕಿದ ಪರಿಣಾಮ ಮೃತದೇಹಗಳು ಚೆಲ್ಲಾಪಿಲ್ಲಿಯಾಗಿವೆ. ತುಮಕೂರು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ಮೃತದೇಹಗಳು ರವಾನೆ ಮಾಡಲಾಗಿದೆ.  ಯಶವಂತಪುರ ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದು, ಯಶವಂತಪುರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net