ಹಾಡಹಗಲೇ ಪಿಸ್ತೂಲ್ ತೋರಿಸಿ ದರೋಡೆಗೆ ಯತ್ನ; ಮೂವರ ಪೈಕಿ ಒಬ್ಬ ಪೊಲೀಸ್ ವಶಕ್ಕೆ...

gun
Published on

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಹಾಡಹಗಲೇ ಮನೆಗೆ ಹೊಕ್ಕು ಪಿಸ್ತೂಲ್ ತೋರಿಸಿ ದರೋಡೆಗೆ ಯತ್ನಿಸಿದ ಪ್ರಕರಣ ವರದಿಯಾಗಿದೆ. ಮೂವರು ಅಪರಿಚಿತರು ಈ ದುಷ್ಕೃತ್ಯ ಎಸಗಿದ್ದು, ಆ ಪೈಕಿ ಒಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರಿನ ಮತ್ತಿಕೆರೆಯ ಬಾಂಬೆ ಡೈಯಿಂಗ್ ರಸ್ತೆಯಲ್ಲಿನ ಮನೆಯೊಂದರಲ್ಲಿ ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಮನೆಯಲ್ಲಿ ಇಬ್ಬರು ವೃದ್ಧೆಯರು ಮತ್ತು ಒಬ್ಬಳು ಯುವತಿ ಮಾತ್ರ ಇರುವುದನ್ನು ಗಮನಿಸಿ ಈ ದುಷ್ಕೃತ್ಯ ಎಸಗಿದ್ದಾರೆ.

ಮನೆಗೆ ನುಗ್ಗಿ ಪಿಸ್ತೂಲ್ ತೋರಿಸಿ ಬೆದರಿಸಿದ ಆರೋಪಿಗಳು ಮನೆಯಲ್ಲಿದ್ದ ಎರಡು ಜುವೆಲ್ಲರಿ ಬಾಕ್ಸ್​ಗಳನ್ನು ದೋಚಿಕೊಂಡು ಪರಾರಿಯಾಗಲು ಯತ್ನಿಸಿದ್ದರು. ಆದರೆ ಅಷ್ಟರಲ್ಲಿ ಸುತ್ತುವರಿದ ಸಾರ್ವಜನಿಕರು ಆರೋಪಿಗಳಲ್ಲಿ ಒಬ್ಬನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಬಂಗಾಳದ ಮೂವರು ಆರೋಪಿಗಳು ಈ ಕೃತ್ಯವೆಸಗಿದ್ದು, ಆ ಪೈಕಿ ಒಬ್ಬನನ್ನು ವಶಕ್ಕೆ ಪಡೆದಿರುವ ಪೊಲೀಸರು, ಆರೋಪಿಗಳು ದೋಚಿದ್ದ ಜುವೆಲ್ಲರಿ ಬಾಕ್ಸ್​ಗಳನ್ನೂ ವಶಕ್ಕೆ ಪಡೆದಿದ್ದಾರೆ. ಮತ್ತಿಬ್ಬರ ಪತ್ತೆಗೆ ಬಲೆ ಬೀಸಿದ್ದಾರೆ. ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net