ಘೋರ ದುರಂತ: ಒಂದೇ ಮನೆಯಲ್ಲಿ ನೇಣಿಗೆ ಶರಣಾದ ಅಜ್ಜಿ, ಮಗಳು, ಮೊಮ್ಮಗಳು...

sucide pic
Published on

ಚಿಕ್ಕಮಗಳೂರು: ಒಂದೇ ಕುಟುಂಬದ ಮೂವರು ಅತ್ಮಹತ್ಯೆಗೆ ಶರಣಾಗಿರುವ ಘಟನೆ ಶೃಂಗೇರಿ ತಾಲೂಕಿನ ಮಕ್ಕಿಮನೆಯಲ್ಲಿ ನಡೆದಿದೆ.

ಶಾರದಮ್ಮ (70), ವೀಣಾ (40), ಶ್ರಾವ್ಯ (17) ಆತ್ಮಹತ್ಯೆಗೆ ಶರಣಾದ ಅಜ್ಜಿ, ಮಗಳು, ಮೊಮ್ಮಗಳು ಎಂದು ಗುರುತಿಸಲಾಗಿದೆ. ನೇಣು ಬಿಗಿದು ಸ್ಥಿತಿಯಲ್ಲಿ ಮೂವರ ದೇಹ ಪತ್ತೆಯಾಗಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

ವೀಣಾ ಅಂಗನವಾಡಿಯ ಶಿಕ್ಷಕಿಯಾಗಿದ್ದರು ಎಂದು ತಿಳಿದು ಬಂದಿದ್ದು, ಸ್ಥಳಕ್ಕೆ ಶೃಂಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net