ಕಾವೇರಿ ನದಿಯಲ್ಲಿ ಈಜಲು ಹೋಗಿ ಮೂವರು ಪಿಯುಸಿ ವಿದ್ಯಾರ್ಥಿಗಳು ನೀರುಪಾಲು

ಕೊಡಗು: ಕಾವೇರಿ ನದಿಯಲ್ಲಿ ಈಜಲು ಹೋಗಿ ಮೂವರು ವಿದ್ಯಾರ್ಥಿಗಳು ನೀರು ಪಾಲಾಗಿರುವ ಘಟನೆ ಜಿಲ್ಲೆಯ ಕುಶಾಲನಗರ ಸಮೀಪ ನಡೆದಿದೆ.

ಆಕಾಶ್​​​, ಶಶಾಂಕ್​​​​ ಮತ್ತು ಗಗನ್​​​​ ನೀರಿನಲ್ಲಿ ಮುಳುಗಿ ಪ್ರಾಣ ಕಳೆದುಕೊಂಡ ವಿದ್ಯಾರ್ಥಿಗಳು. ಮಡಿಕೇರಿ ಜೂನಿಯರ್​​ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಬುಧವಾರ ರಮಜಾನ್ ಪ್ರಯುಕ್ತ ಕಾಲೇಜಿಗೆ ರಜೆ ನೀಡಿದ್ದ ಹಿನ್ನೆಲೆಯಲ್ಲಿ ಸ್ನೇಹಿತರ ಜತೆ ಈಜಲು ಹೋಗಿದ್ದ ಈ ವೇಳೆ ಅವಘಡ ಸಂಭವಿಸಿದೆ ಎನ್ನಲಾಗಿದೆ.

ಮೂವರು ಮೃತದೇಹಗಳನ್ನು ಅಗ್ನಿಶಾಮಕ ದಳ ಹೊರತೆಗೆದಿದೆ. ಮೃತರ ಕುಟುಂಬದವರು ಮತ್ತು ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. (ದಿಗ್ವಿಜಯ ನ್ಯೂಸ್​)