ಕಾರ್ಕಳ ಜ್ಞಾನಸುಧಾದ ಮೂವರು ರಾಜ್ಯ ತಂಡಕ್ಕೆ ಆಯ್ಕೆ

BLM
Published on

ಕಾರ್ಕಳ: ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಿಟ್ಟೆಯ ಡಾ.ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಜಿಲ್ಲಾಮಟ್ಟದ ಬಾಸ್ಕೆಟ್ ಬಾಲ್ ಪಂದ್ಯದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದಿದೆ. ತಂಡದಲ್ಲಿದ್ದ ಪೂರ್ಣಶ್ರೀ ವಿ.ಎಸ್., ಶ್ರೇಯಾ ಹೆಮರಡ್ಡಿ ಸಿ. ಮತ್ತು ಗ್ರೀಷ್ಮಾ ಎಸ್. ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರ್ ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ.ಸುಧಾಕರ್ ಶೆಟ್ಟಿ ಅಭಿನಂದಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net