

ತುಮಕೂರು: ಖಾಸಗಿ ಬಸ್ (Private Bus) ಪಲ್ಟಿ ಹೊಡೆದು ಮೂವರು ಮಹಿಳೆಯರು ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿನ ಚಿಕ್ಕನಹಳ್ಳಿ ಬಳಿ ನಡೆದಿದೆ. ಘಟನೆಯಲ್ಲಿ 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತವು ಬೆಳಗಿನ ಜಾವ 4:45ರ ಸುಮಾರಿಗೆ ಸಂಭವಿಸಿದ್ದು, ಗೋವಾದಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್ಗೆ ಡಿಕ್ಕಿ ಹೊಡೆದಿದ್ದು, ನಂತರ ಪಲ್ಟಿಯಾಗಿದೆ. ಇದರ ಪರಿಣಾಮ ಮೂವರು ಮಹಿಳೆಯರು ಮೃತಪಟ್ಟಿದ್ದಾರೆ.
ವಿಚಾರ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಆ ಬಳಿಕ ಮಾತನಾಡಿದ ಎಸ್ಪಿ, ಮೃತರನ್ನು ಶುಬಾಳಿ ಸಿಂಗ್, ಊರ್ವಿ, ಪ್ರಿಯಾಂಕ ಎಂದು ಗುರುತಿಸಲಾಗಿದೆ. ಬಸ್ಸಿನಲ್ಲಿ ಒಟ್ಟು 29 ಮಂದಿ ಪ್ರಯಾಣಿಸುತ್ತಿದ್ದರು. ಬೆಳಗಿನ ಜಾವ 4:45ರ ಸುಮಾರಿಗೆ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್ಗೆ ಡಿಕ್ಕಿ ಹೊಡೆದಿದ್ದು, ನಂತರ ಪಲ್ಟಿಯಾಗಿದೆ.
ಘಟನೆಯಲ್ಲಿ ಮೂವರು ಮಹಿಳೆಯರು ಮೃತಪಟ್ಟಿದ್ದು, 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಲಾಗಿದೆ. ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಮಾಹಿತಿ ನೀಡಿದ್ದಾರೆ.