ಪಟಾಕಿ ಗೋದಾಮಿನಲ್ಲಿ ಭೀಕರ ಸ್ಫೋಟ; ಮೂವರು ಮಹಿಳೆಯರು ಸಾವು, ಮುಂದುವರೆದ ರಕ್ಷಣಾ ಕಾರ್ಯಾಚರಣೆ

Fire Accident
Published on

ಚೆನ್ನೈ: ಪಟಾಕಿ ಗೋದಾಮಿನಲ್ಲಿ (Crackers Godown) ಸಂಭವಿಸಿದ ಭೀಕರ ಸ್ಫೋಟದಲ್ಲಿ ಮೂವರು ಮಹಿಳೆಯರು ಮೃತಪಟ್ಟಿರುವ ಘಟನೆ ತಮಿಳುನಾಡಿನ ಧರ್ಮಪುರಿಯಲ್ಲಿ ನಡೆದಿದೆ. ಮೃತರನ್ನು ಶೆನ್ಬಗಂ, ತಿರುಮಲರ್ ಮತ್ತು ಮಂಜು ಎಂದು ಗುರುತಿಸಲಾಗಿದ್ದು, ಈ ಮೂವರು ಪಟಾಕಿ ಗೋದಾಮಿನಲ್ಲಿ ಕೆಲಸ ಮಾಡುತ್ತಿದ್ದರು ಎಂದು ವರದಿಯಾಗಿದೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಧರ್ಮಪುರಿ ಜಿಲ್ಲಾಧಿಕಾರಿ ಸತೀಶ್, ವಿಚಾರ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಮತ್ತು ರಕ್ಷಣಾ ಇಲಾಖೆ ಪೊಲೀಸರೊಂದಿಗೆ ರಕ್ಷಣಾ ಕಾರ್ಯಾಚರಣೆ ಆರಂಭಿಸಿದೆ. ಆದಾಗ್ಯೂ, ಅವರು ದೇಹಗಳನ್ನು ಮಾತ್ರ ಮರುಪಡೆಯಲು ಸಾಧ್ಯವಾಯಿತು. 

ಪಟಾಕಿ ಘಟಕವು (Crackers Unit) ದೀರ್ಘಕಾಲದವರೆಗೆ ಮಾನ್ಯ ಸರ್ಕಾರಿ ಪರವಾನಗಿಯೊಂದಿಗೆ ಕಾರ್ಯನಿರ್ವಹಿಸುತ್ತಿದೆ. ಸ್ಫೋಟದ ಹಿಂದಿನ ಕಾರಣವನ್ನು ತನಿಖೆ ಮಾಡಲಾಗುತ್ತಿದ್ದು, ಬೆಂಕಿಯನ್ನು ನಿಯಂತ್ರಿಸಲು ಅಗ್ನಿಶಾಮಕ ಮತ್ತು ರಕ್ಷಣಾ ಸೇವಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸುರಕ್ಷತಾ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದನ್ನು ಖಚಿತಪಡಿಸಿಕೊಳ್ಳಲು ಜಿಲ್ಲಾಡಳಿತವು ಈ ಪ್ರದೇಶದ ಎಲ್ಲಾ ಪಟಾಕಿ ತಯಾರಿಕೆ ಮತ್ತು ಸಂಗ್ರಹಣಾ ಘಟಕಗಳನ್ನು ಕೂಲಂಕಷವಾಗಿ ಪರಿಶೀಲಿಸಲಿದೆ ಎಂದು ಜಿಲ್ಲಾಧಿಕಾರಿ ಸತೀಶ್ ತಿಳಿಸಿದ್ದಾರೆ.

ದುರ್ಘಟನೆಯ ನಂತರ ಮೃತರ ಕುಟುಂಬಸ್ಥರು ನ್ಯಾಯಾಕ್ಕಾಗಿ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದರು. ಪಟಾಕಿ ಗೋದಾಮು ವಸತಿ ಪ್ರದೇಶದಲ್ಲಿದ್ದು, ಇದು ಹೆಚ್ಚಿನ ಅಪಾಯವನ್ನುಂಟು ಮಾಡುತ್ತದೆ ಎಂದು ಕಳವಳ ವ್ಯಕ್ತಪಡಿಸಿದರು. ಘಟನೆ ಸಂಬಂಧ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ 4 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net