More

    ಸವಲತ್ತು ಬಳಸಿಕೊಂಡು ಅಭಿವೃದ್ಧಿ ಸಾಧಿಸಿ

    ಹನೂರು: ಮಹಿಳೆಯರು ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ಸದ್ಬಳಕೆ ಮಾಡಿಕೊಂಡು ಜೀವನ ಮಟ್ಟವನ್ನು ಉತ್ತಮ ಪಡಿಸಿಕೊಳ್ಳುವುದರ ಜತೆಗೆ ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕು ಎಂದು ಶಾಸಕ ಎಂ.ಆರ್ ಮಂಜುನಾಥ್ ತಿಳಿಸಿದರು.

    ಪಟ್ಟಣದ ಲೋಕೋಪಯೋಗಿ ಇಲಾಖೆಯ ಅತಿಥಿ ಗೃಹದ ಆವರಣದಲ್ಲಿ ಗುರುವಾರ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ತರಬೇತಿ ಪಡೆದ 36 ಮಹಿಳೆಯರಿಗೆ ಹೊಲಿಗೆ ಯಂತ್ರವನ್ನು ವಿತರಿಸಿ ಮಾತನಾಡಿದರು.

    ಈ ಹಿಂದೆ ಮಹಿಳೆಯರಿಗೆ ಸಮಾಜದಲ್ಲಿ ಉತ್ತಮ ಸ್ಥಾನಮಾನ ಇರಲಿಲ್ಲ. ಆದರೀಗ ಮಹಿಳೆಯರು ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡುವುದರ ಮೂಲಕ ಸಮಾಜದಲ್ಲಿ ಉತ್ತಮ ಸ್ಥಾನವನ್ನು ಪಡೆದಿದ್ದು, ಹೆಣ್ಣು ಅಬಲೆಯಲ್ಲ ಸಬಲೆ ಎಂಬುದನ್ನು ತೋರಿಸಿ ಕೊಟ್ಟಿದ್ದಾರೆ. ಹಾಗೆಯೇ ಸರ್ಕಾರ ಮಹಿಳೆಯರ ಸಬಲೀಕರಣಕ್ಕೆ ಹೆಚ್ಚಿನ ಒತ್ತನ್ನು ನೀಡಿದ್ದು, ಹಲವು ಸವಲತ್ತುಗಳನ್ನು ಒದಗಿಸುತ್ತಿದೆ. ಈ ದಿಸೆಯಲ್ಲಿ ಜೀವನೋಪಾಯಕ್ಕೆ ಅನುಕೂಲವಾಗುವಂತೆ ವಿವಿಧ ಕೌಶಲಗಳಿಗೆ ತರಬೇತಿಗಳನ್ನು ಸಹ ನೀಡುತ್ತಿದ್ದು, ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 36 ಮಹಿಳೆಯರು ತರಬೇತಿಯನ್ನು ಪಡೆದಿರುವುದು ಮೆಚ್ಚುಗೆಯ ಸಂಗತಿ. ಈ ದಿಸೆಯಲ್ಲಿ ಹೊಲಿಗೆ ಯಂತ್ರ ವಿತರಿಸಲಾಗುತ್ತಿದೆ. ಆದ್ದರಿಂದ ಪ್ರತಿಯೊಬ್ಬರೂ ಇದರ ಪ್ರಯೋಜನ ಪಡೆದುಕೊಳ್ಳಬೇಕು. ಇದರಿಂದ ಜೀವನ ಮಟ್ಟವನ್ನು ಉತ್ತಮ ಪಡಿಸುತ್ತದೆ. ಆರ್ಥಿಕವಾಗಿಯೂ ಸ್ವಾವಲಂಬಿಯಾಗುವಂತೆ ಬದುಕನ್ನು ರೂಪಿಸುತ್ತದೆ ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ನಿಗಮದ ಜಿಲ್ಲಾ ವ್ಯವಸ್ಥಾಪಕಿ ಎಚ್.ಎ ಶೋಭಾ, ಮುಖಂಡರಾದ ವಿಜಯಕುಮಾರ್, ರಾಜಣ್ಣ, ಮಂಜೇಶ್, ಸಿದ್ದರಾಜು, ಮಹೇಶ್ ಹಾಗೂ ಫಲಾನುಭವಿಗಳು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts