ಶ್ರೀ ವೆಂಕಟರಮಣ ಕಾಲೇಜು ದ್ವಿತೀಯ

second
ಥ್ರೋಬಾಲ್ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕುಂದಾಪುರದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ತಂಡ
Published on

ಕುಂದಾಪುರ: ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಬಿದ್ಕಲ್‌ಕಟ್ಟೆ ಸರ್ಕಾರಿ ಪದವಿ ಪೂರ್ವ ಕಾಲೇಜು ಸಹಯೋಗದಲ್ಲಿ ಬಿದ್ಕಲ್‌ಕಟ್ಟೆಯಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ ಥ್ರೋಬಾಲ್ ಪಂದ್ಯಾಟದಲ್ಲಿ ಕುಂದಾಪುರದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದರು.

ವಿದ್ಯಾರ್ಥಿನಿಯರಾದ ಅಂಕಿತಾ, ಆಯೇಷಾ, ರಿಷಾ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪ್ರಾಂಶುಪಾಲ ಸಂದೀಪ್ ಗಾಣಿಗ, ಉಪಪ್ರಾಂಶುಪಾಲ ಸುಜಯ್ ಕೋಟೆಗಾರ್, ದೈಹಿಕ ಶಿಕ್ಷಣ ಉಪನ್ಯಾಸಕ ರಾಘವೇಂದ್ರ ಗಾಣಿಗ ತಂಡದ ಜತೆಗಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net