ಅಚ್ಚುಕಟ್ಟಾಗಿ ಕ್ರೀಡಾಕೂಟ ಆಯೋಜನೆ : ಲಿಲ್ಲಿ ಪಾಯ್ಸ ಶ್ಲಾಘನೆ ಹೋಬಳಿಮಟ್ಟದ ಥ್ರೋಬಾಲ್ ಪಂದ್ಯಾಟ ಉದ್ಘಾಟನೆ

New Project (23)
Published on

ಉಳ್ಳಾಲ: ಮಳೆಯಿಂದಾಗಿ ನಿರಂತರ ರಜೆಯ ಕಾರಣ ಕಾರ್ಯಕ್ರಮ ನಡೆಸಲು ತೊಂದರೆಯಾದರೂ ಥ್ರೋಬಾಲ್ ಪಂದ್ಯಾಟ ಅಚ್ಚುಕಟ್ಟಾಗಿ ಅಯೋಜಿಸಲಾಗಿದೆ, ಯಾವುದೇ ಕಾರ್ಯಕ್ರಮದ ಜವಾಬ್ದಾರಿ ನೀಡಿದರೂ ಸಯ್ಯದ್ ಮದನಿ ಶಿಕ್ಷಣ ಸಂಸ್ಥೆಗಳು ನೀಡುವ ಆತಿಥ್ಯ ಇತರ ಶಾಲೆಗಳಿಗೆ ಮಾದರಿ ಎಂದು ದೈಹಿಕ ಶಿಕ್ಷಣ ತಾಲೂಕು ಪರಿವೀಕ್ಷಣಾಧಿಕಾರಿ ಲಿಲ್ಲಿ ಪಾಯ್ಸ ಶ್ಲಾಘಿಸಿದರು.

ದ.ಕ. ಜಿಲ್ಲಾ ಪಂಚಾಯಿತಿ ಶಾಲಾ ಶಿಕ್ಷಣ ಇಲಾಖೆ, ಮಂಗಳೂರು ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಅನುದಾನಿತ ಟಿಪ್ಪು ಸುಲ್ತಾನ್ ಶಿಕ್ಷಣ ಸಂಸ್ಥೆಗಳ ಸಹಯೋಗದಲ್ಲಿ ಕೋಟೆಪುರ ಟಿಪ್ಪು ಸುಲ್ತಾನ್ ಶಾಲಾ ವಠಾರದಲ್ಲಿ ಸೋಮವಾರ ಆಯೋಜಿಸಲಾದ ಉಳ್ಳಾಲ ಹೋಬಳಿಮಟ್ಟದ ಪ್ರೌಢಶಾಲಾ ಬಾಲಕ-ಬಾಲಕಿಯರ ಥ್ರೋಬಾಲ್ ಪಂದ್ಯಾಟ ಉದ್ಘಾಟಿಸಿ ಮಾತನಾಡಿದರು.

ಸಯ್ಯದ್ ಮದನಿ ಚಾರಿಟೆಬಲ್ ಟ್ರಸ್ಟ್ ಸಂಯೋಜಕ ಎಂ.ಎಚ್.ಮಲಾರ್ ಅಧ್ಯಕ್ಷತೆ ವಹಿಸಿದ್ದರು. ಸಯ್ಯದ್ ಮದನಿ ಚಾರಿಟೆಬಲ್ ಟ್ರಸ್ಟ್ ಜತೆಕಾರ್ಯದರ್ಶಿ ಅಬ್ದುಲ್ ಅಝೀಝ್, ಪ್ರೌಢಶಾಲಾ ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷೆ ಜಯವಂತಿ ಸೋನ್ಸ್, ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಎಂ.ಕೆ.ಮಂಜನಾಡಿ, ಸಿಆರ್‌ಪಿ ಮೋಹನ್ ಶಿರ್ಲಾಲ್, ರಾಜ್ಯ ಕಾರ್ಯದರ್ಶಿ ತ್ಯಾಗಂ ಹರೇಕಳ, ತಾಲೂಕು ಕಾರ್ಯದರ್ಶಿ ಮೋಹನ್ ಶಿರ್ಲಾಲ್, ನೋಡೆಲ್ ಅಧಿಕಾರಿ ರಾಜೀವ ನಾಯಕ್, ಸಯ್ಯದ್ ಮದನಿ ಶಿಕ್ಷಣ ಸಂಸ್ಥೆಗಳ ಮುಖ್ಯಶಿಕ್ಷಕರಾದ ನಸೀಮಾ, ರಮ್ಲತ್ ಬಾನು ಮೊದಲಾದವರು ಉಪಸ್ಥಿತರಿದ್ದರು.

ಮುಖ್ಯಶಿಕ್ಷಕಿ ಗೀತಾ ಡಿ.ಶೆಟ್ಟಿ ಸ್ವಾಗತಿಸಿದರು. ಶಿಕ್ಷಕ ಅಖಿಲ್ ವಂದಿಸಿದರು. ಚಿತ್ರಕಲಾ ಶಿಕ್ಷಕ ರಫೀಕ್ ತುಂಬೆ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net