ಉಳ್ಳಾಲ: ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಕಾರ್ಯಕಾರಿಣಿ ಸಭೆ ಇತ್ತೀಚಿಗೆ ಕೋಲಾರದಲ್ಲಿ ನಡೆದು ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಉಳ್ಳಾಲ ತಾಲೂಕಿನ ಶ್ರೀ ರಾಮಕೃಷ್ಣ ಅನುದಾನಿತ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ತ್ಯಾಗಂ ಹರೇಕಳ ಪ್ರಧಾನ ಕಾರ್ಯದರ್ಶಿಯಾಗಿ ಅವಿರೋಧವಾಗಿ ಆಯ್ಕೆಯಾಗುವ ಮೂಲಕ ಪ್ರಥಮ ಬಾರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಶಿಕ್ಷಕರೊಬ್ಬರು ಈ ಸ್ಥಾನ ಪಡೆದಿದ್ದಾರೆ. ಇವರು ಮಂಗಳೂರು ತಾಲೂಕು ಸಂಘದ ಅಧ್ಯಕ್ಷರಾಗಿ, ಜಿಲ್ಲಾ ಸಂಘದ ಕೋಶಾಧಿಕಾರಿಯಾಗಿ, ರಾಜ್ಯ ಸಂಘದ ಪ್ರಚಾರ ಸಮಿತಿ ಮುಖ್ಯಸ್ಥರಾಗಿ, ಮೈಸೂರು ವಿಭಾಗೀಯ ಕಾರ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.
ಬೆಥನಿ ವಿದ್ಯಾಸಂಸ್ಥೆಯಿಂದ ಮೌಲ್ಯಾಧಾರಿತ ಶಿಕ್ಷಣ — ವಜ್ರ ಮಹೋತ್ಸವದಲ್ಲಿ ಡಾ.ಲಿಲ್ಲಿ ಪಿರೇರಾ ಹೇಳಿಕೆ