More

  ಪರಿಷತ್ ಟಿಕೆಟ್ ಮಾನದಂಡ ಹೈಕಮಾಂಡ್ ನಿರ್ಧಾರ: ಡಿಸಿಎಂ ಡಿ.ಕೆ.ಶಿವಕುಮಾರ್

  ಬೆಂಗಳೂರು: ವಿಧಾನ ಪರಿಷತ್ ಚುನಾವಣೆ ಟಿಕೆಟ್ ಗೆ ಕಾಂಗ್ರೆಸ್ ಪಕ್ಷದಲ್ಲಿ 300ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದು, ಹಂಚಿಕೆ ಮಾನದಂಡವನ್ನು ಪಕ್ಷದ ಹೈಕಮಾಂಡ್ ನಾಯಕರು ತೀರ್ಮಾನಿಸುತ್ತಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.
  ಟಿಕೆಟ್ ಹಂಚಿಕೆ ಸಂಬಂಧ ಹೈಕಮಾಂಡ್ ಭೇಟಿಗಾಗಿ ದೆಹಲಿಗೆ ಪ್ರಯಾಣ ಬೆಳೆಸುವ ಮುನ್ನ ಮಾಧ್ಯಮಗಳಿಗೆ ಅವರು ಪ್ರತಿಕ್ರಿಯೆ ನೀಡಿದರು.
  ಪರಿಷತ್ತಿನ 7 ಸ್ಥಾನಗಳಿಗೆ ಪಕ್ಷದಲ್ಲಿ 300ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದಾರೆ. ಎಲ್ಲಾ ವರ್ಗದಲ್ಲೂ ಆಕಾಂಕ್ಷಿಗಳಿದ್ದಾರೆ. ಈ ಬಾರಿ ಎಲ್ಲಾ ವರ್ಗದವರಿಗೆ ಅವಕಾಶ ಕಲ್ಪಿಸಲು ಸಾಧ್ಯವಿಲ್ಲ. ಎಲ್ಲರೂ ಬ್ಲಾಕ್, ಜಿಲ್ಲಾ, ರಾಜ್ಯಮಟ್ಟದಲ್ಲಿ ಪಕ್ಷಕ್ಕೆ ದುಡಿದಿದ್ದಾರೆ. ಕರಾವಳಿ ಕರ್ನಾಟಕ, ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ, ಹಳೇ ಮೈಸೂರು ಭಾಗ ಸೇರಿದಂತೆ ಎಲ್ಲಾ ಕಡೆಯಿಂದ ಅವಕಾಶ ನೀಡಬೇಕು ಎನ್ನುವ ಬೇಡಿಕೆ ಇದೆ. ಕೆಲವು ಸ್ಥಾನಗಳಲ್ಲಿ ಹಾಲಿ ಸದಸ್ಯರು ಇದ್ದಾರೆ. ಹೀಗಾಗಿ ಈ ಬಾರಿ ಕಷ್ಟಕರ ಪರಿಸ್ಥಿತಿ ಎದುರಾಗಿದೆ. ಹೈಕಮಾಂಡ್ ಯಾವ ತೀರ್ಮಾನ ಮಾಡಲಿದೆ ಎಂದು ನೋಡೋಣ ಎಂದರು.

  See also  ದೇಶದಲ್ಲಿ ಇನ್ನು 20 ವರ್ಷ ಮೋದಿ ಗ್ರಾಫ್ ಇಳಿಯಲ್ಲ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts