ಲೋಕಸಭೆಗೆ ಟಿಕೆಟ್ ಸಿಕ್ಕರೆ ಗೆಲುವು ಖಚಿತ

ಅಜ್ಜಂಪುರ: ಕ್ಷೇತ್ರದ ಜನರಿಗೆ ಅಗತ್ಯ ಮೂಲ ಸೌಲಭ್ಯ ಒದಗಿಸಲು ಪ್ರಾಮಾಣಿಕವಾಗಿ ಯತ್ನಿಸಿದ್ದು ಈ ಬಾರಿ ಮತ್ತೆ ಟಿಕೆಟ್ ದೊರೆತರೆ ಗೆಲುವು ಖಚಿತ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ಸಂಸದೆಯಾಗಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಪಾಸ್​ಪೋರ್ಟ್ ಸೇವಾ ಕೇಂದ್ರ, ಮಹಿಳಾ ಸಾಂತ್ವಾನ ಕೇಂದ್ರ ಹೀಗೆ ಹಲವು ಯೋಜನೆಗಳನ್ನು ಕ್ಷೇತ್ರಕ್ಕೆ ನೀಡಲಾಗಿದೆ ಎಂದರು. ನರೆಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಐದು ವರ್ಷಗಳಲ್ಲಿ ವಿಶ್ವವೇ ಭಾರತವನ್ನು ತಿರುಗಿ ನೋಡುವಂತೆ ಮಾಡಿದ್ದಾರೆ. ವಿರೋಧ ಪಕ್ಷಗಳು ಮೋದಿ ಕೇವಲ ವಿದೇಶ ಪ್ರವಾಸಕ್ಕೆ ಸೀಮಿತವಾಗಿದ್ದಾರೆ ಎಂದು ಟೀಕಿಸುತ್ತಿದ್ದರು ಆದರೆ ಉಗ್ರರ ವಿರುದ್ಧ ತೆಗೆದುಕೊಂಡ ನಿಲುವಿಗೆ ವಿದೇಶಗಳು ನೀಡಿದ ಬೆಂಬಲಕ್ಕೆ ಸರಿಯಾದ ಉತ್ತರ ಸಿಕ್ಕಿದೆ. ಮೋದಿ ಅವರ ಅಭಿವೃದ್ಧಿಯ ಕಾರ್ಯಗಲಿಂದ 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 300ಕ್ಕೂ ಅಧಿಕ ಸ್ಥಾನದಲ್ಲಿ ಗೆಲ್ಲಲಿದೆ ಎಂದರು. ಕೇಂದ್ರ ಸರ್ಕಾರ ರೈತ ಸಮ್ಮಾನ್, ಉಜ್ವಲ ಯೋಜನೆ, ಆಯುಷ್ಮಾನ್ ಭಾರತ ಸೇರಿದಂತೆ ಜನಸಾಮನ್ಯರಿಗೆ ಅನುಕೂಲವಾಗುವಂತ ನೂರಾರು ಯೋಜನೆಗಳನ್ನು ಜಾರಿಗೊಳಿಸಿದೆ. ನರೇಂದ್ರ ಮೋದಿ ಅವರ ಸರ್ಕಾರ ಮಾಡಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ದೇಶದ ಪ್ರತಿಯೊಬ್ಬ ಪ್ರಜೆ ಹೆಮ್ಮೆ ಪಡುವಂತಾಗಿದೆ