

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ನಟನೆಯ ಬಹುನಿರೀಕ್ಷಿತ 'ಟೈಗರ್ 3' ಚಿತ್ರಕ್ಕೆ ಕ್ಷಣಗಣನೆ ಆರಂಭಗೊಂಡಿದ್ದು, ಸಿನಿಮಾದ ಟೀಸರ್ ರಿಲೀಸ್ ಆಗುವ ದಿನಾಂಕದ ಬಗ್ಗೆ ಇದೀಗ ಹೊಸ ಮಾಹಿತಿಯೊಂದು ದೊರಕಿದೆ.
ಈ ಹಿಂದೆ ಸಲ್ಮಾನ್ ಖಾನ್ ನಟಿಸಿದ್ದ 'ಕಿಸಿ ಕಾ ಭಾಯ್ ಕಿಸಿ ಕಿ ಜಾನ್' ಚಿತ್ರವು ಸಿನಿಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆಯಲಿಲ್ಲ. ಆದ್ರೆ, ಮುಂಬರುವ 'ಟೈಗರ್ 3' ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ವ್ಯಕ್ತವಾಗಿದ್ದು, ಬಿಡುಗಡೆಗೆ ಸಲ್ಮಾನ್ ಅವರ ಅಭಿಮಾನಿಗಳು ತೀವ್ರ ಕುತೂಹಲದಿಂದ ಕಾಯುತ್ತಿದ್ದಾರೆ. ಮನೀಶ್ ಶರ್ಮಾ ನಿರ್ದೇಶನದ, ಬಿಗ್ ಬಜೆಟ್ ಚಿತ್ರವನ್ನು ಯಶ್ ರಾಜ್ ಫಿಲ್ಮ್ಸ್ ನಿರ್ಮಿಸಿದ್ದು, ಚಿತ್ರವು 10 ನವೆಂಬರ್ 2023 ರಂದು ತೆರೆಗೆ ಬರಲು ಸಜ್ಜಾಗಿದೆ.
ಚಿತ್ರದ ಟೀಸರ್ ಇದೇ ಆಗಸ್ಟ್ 15 ರಂದು ಬಿಡುಗಡೆಯಾಗಲಿದ್ದು, ಚಿತ್ರವು ದೇಶಭಕ್ತಿಯ ಹಿನ್ನೆಲೆಯನ್ನು ಹೊಂದಿರುವುದರಿಂದ, ಸ್ವಾತಂತ್ರ್ಯ ದಿನಾಚರಣೆಯ ದಿನದಂದೇ ಟೀಸರ್ ರಿಲೀಸ್ ಮಾಡಲು ಚಿತ್ರತಂಡ ಯೋಜಿಸಿದೆ. ತಯಾರಕರು ಈ ಸಿನಿಮಾವನ್ನು ಹಿಂದಿ, ತೆಲುಗು ಮತ್ತು ತಮಿಳಿನಲ್ಲಿ ಬಿಡುಗಡೆ ಮಾಡಲಿದ್ದಾರೆ ಎಂದು ಹೇಳಲಾಗಿದೆ,(ಏಜೆನ್ಸೀಸ್).