More

    ಕಾಂಗ್ರೆಸ್​​ ಶಾಸಕನ ಕೊರಳಲ್ಲಿ ಹುಲಿ ಉಗುರು ಮಾದರಿ ಪೆಂಡೆಂಟ್; ಬಳ್ಳಾರಿ ಶಾಸಕ ಭರತ್ ರೆಡ್ಡಿ ಹೇಳಿದ್ದೇನು?

    ಬೆಂಗಳೂರು: ಹುಲಿ ಉಗುರು ಪ್ರಕರಣದಲ್ಲಿ ವರ್ತೂರು ಸಂತೋಷ್ ಬಂಧನವಾದ ಬಳಿಕ ರಾಜ್ಯದಲ್ಲಿ ಸ್ವಾಮೀಜಿ, ಸೆಲೆಬ್ರಿಟಿಗಳು, ರಾಜಕಾರಣಿಗಳು ಧರಿಸಿರುವ ಬಗ್ಗೆ ಒಂದೊಂದೇ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಬಳ್ಳಾರಿ ನಗರ ಶಾಸಕ ಭರತ್ ರೆಡ್ಡಿ ಕೊರಳಲ್ಲಿರುವ ಹುಲಿ ಉಗುರಿನ ಪೆಂಡೆಂಟ್ ಧರಿಸಿರುವ ಫೋಟೋ ವೈರಲ್ ಆಗಿದೆ.

    ಬಳ್ಳಾರಿ ನಗರ ಶಾಸಕನಾಗಿರುವ ಭರತ್ ರೆಡ್ಡಿ ಹುಲಿ ಉಗುರು ಮಾದರಿಯ ಪೆಂಡೆಂಟ್​​ ಧರಿಸಿದ ಫೋಟೋ ಸೋಶಿಯಲ್​​ ಮೀಡಿಯಾದಲ್ಲಿ ವೈರಲ್ ಆಗಿದೆ. ಮದುವೆ ಸಮಯದಲ್ಲಿ ಹಾಕಿದ್ದ ಹುಲಿ ಉಗುರಿನ ಪೆಂಡೆಂಟ್. ಫೋಟೋ ವೈರಲ್ ಆಗುತ್ತಿದ್ದಂತೆ  ಭರತ್​ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.

    ಬಗ್ಗೆ ವ್ಯಂಗ್ಯವಾಗಿ ಪ್ರತಿಕ್ರಿಯೆ ನೀಡಿರುವ ಶಾಸಕ ಭರತ್ ರೆಡ್ಡಿ, “ನಾನು ಹಾಕಿರೋದು ಒರಿಜಿನಲ್ ಹುಲಿ ಉಗುರಿನ ಪೆಂಡೆಂಟ್ ಅಲ್ಲ, ಅದೊಂದು ಸಿಂಥೆಟಿಕ್ ಹುಲಿ ಉಗುರಿನ ಪೆಂಡೆಂಟ್ . ಸಾಮಾನ್ಯವಾಗಿ ಅಷ್ಟು ಸುಲಭವಾಗಿ ಹುಲಿ ಉಗುರುಗಳು ಸಿಗಲ್ಲ. ಗೋಲ್ಡ್ ಶಾಪ್ ನಲ್ಲಿ ಹುಲಿ ಉಗುರಿನ ಸಿಂಥೆಟಿಕ್ ಪೆಂಡೆಂಟ್ ಸಿಗುತ್ತವೆ. ಈಗ ಸಿಕ್ಕಿರುವ ಪೆಂಡೆಂಟ್ ಗಳು ಬಹುತೇಕ ಸಿಂಥೆಟಿಕ್ ಎನ್ನುವುದು ನನ್ನ ಅಭಿಪ್ರಾಯ. ಭಾರತದಲ್ಲಿ ಹುಲಿಗಳನ್ನು ರಕ್ಷಣೆ ಮಾಡಿಕೊಂಡು ಬಂದಿದ್ದೇವೆ. ಸಿಂಥೆಟಿಕ್ ನಿಂದ ಮಾಡಿರುವ ಹುಲಿ ಉಗುರು ಬೇಕಾದರೆ ನಿಮಗೂ ವಿಳಾಸ ಕೊಡ್ತೇನೆ. ನೀವು ಸಿಂಥೆಟಿಕ್ ಹುಲಿ ಉಗುರು ಖರೀದಿ ಮಾಡಬಹುದು ಎಂದಿದ್ದಾರೆ.

    ಹುಲಿ ಉಗುರು ಪೆಂಡೆಂಟ್ ಧರಿಸಿದ ಪ್ರಕರಣದಲ್ಲಿ ರಾಜ್ಯ ಸರ್ಕಾರದ ಶಾಸಕರು, ಮಂತ್ರಿಗಳ ಕುಟುಂಬಸ್ಥರದೇ ಸಾಲು ಸಾಲು ಫೋಟೊಗಳು ವೈರಲ್ ಆಗುತ್ತಿವೆ. ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ, ಅಳಿಯ, ಶಾಸಕ ಲಕ್ಷ್ಮಣ್ ಸವದಿ ಪುತ್ರನ, ಬಳಿಕ ಇದೀಗ ಬಳ್ಳಾರಿ ನಗರ ಶಾಸಕ ಭರತ್ ರೆಡ್ಡಿ ಕೊರಳಲ್ಲಿರುವ ಹುಲಿ ಉಗುರಿನ ಪೆಂಡೆಂಟ್ ಧರಿಸಿರುವ ಫೋಟೊ ವೈರಲ್ ಆಗಿದೆ.

    ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ ಅಡಿಯಲ್ಲಿ: ಯಾವುದೇ ವನ್ಯ ಜೀವಿಗೆ ಸಂಬಂಧಿಸಿದ ವಸ್ತುಗಳು, ಅಂದರೆ ಚರ್ಮ, ಮೂಳೆ. ಕೊಂಬು, ಕೂದಲು ಇತ್ಯಾದಿ ವಸ್ತುಗಳ ಸಂಗ್ರಹ ತಪ್ಪು. ಅಂತಹ ಸಂಗ್ರಹಗಳಿದ್ದರೆ ಕೂಡಲೇ ಇಲಾಖೆಗೆ ಒಪ್ಪಿಸಬೇಕು. ಇಲ್ಲವೇ ಇಲಾಖೆಯಿಂದ ಸೂಕ್ತ ಪ್ರಮಾಣ ಪತ್ರ ಪಡೆಯಬೇಕು. ಅಕ್ರಮ ಎಂದು ಸಾಬೀತಾದರೆ 3 ರಿಂದ 7 ವರ್ಷ ಜೈಲು ಮತ್ತು ಕನಿಷ್ಠ 10000 ರೂ ದಂಡ ವಿಧಿಸುವ ಸಾಧ್ಯತೆ ಇದೆ.

    ಹುಲಿ ಉಗುರು ಅಷ್ಟು ಪವರ್​​ಫುಲ್ಲಾ?; ಯಾಕೆ ಧರಿಸುತ್ತಾರೆ ಗೊತ್ತಾ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts