More

    ನಾನು ಧರಿಸಿದ್ದ ಹುಲಿ ಉಗುರು ಪೆಂಡೆಂಟ್ ಕೃತಕವಾದದ್ದೇ ಹೊರತು ನೈಜವಾದುದ್ದಲ್ಲ: ನಿಖಿಲ್ ಕುಮಾರಸ್ವಾಮಿ

    ಬೆಂಗಳೂರು:  ಹುಲಿ ಉಗುರಿನ ಲಾಕೆಟ್​ ಧರಿಸಿದ ಬಿಗ್ ಬಾಸ್ ಸ್ಪರ್ಧಿ ವರ್ತೂರ್ ಸಂತೋಷ್ ಬಂಧನವಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನದಲ್ಲಿ ಇಡಲಾಗಿದೆ. ಈ ಬೆನ್ನಲ್ಲೇ ಜಗ್ಗೇಶ್​​, ದರ್ಶನ್​, ವಿನಯ್​​ ಗೂರೂಜಿ ಹಾಗೂ ನಿಖಿಲ್​​​ ಕುಮಾರಸ್ವಾಮಿ ಅವರ ಬಳಿ ಕೂಡಾ ಹುಲಿ ಉಗುರಿನ ಲಾಕೆಟ್​​ ಎನ್ನುವ ಕೆಲವು ಫೋಟೋ ವಿಡಿಯೋಗಳು ಸೋಶಿಯಲ್​​​ ಮೀಡಿಯಾದಲ್ಲಿ ಹರಿದಾಡುತ್ತಿವೆ. 

    ನಿಖಿಲ್ ಕುಮಾರಸ್ವಾಮಿ  ಅವರು ಹುಲಿ ಉಗುರು ಇರುವ ಪೆಂಡೆಂಟ್ ಧರಿಸಿದ್ದರು ಎನ್ನಲಾದ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಅವರ ವಿರುದ್ಧವೂ ಕ್ರಮ ಕೈಗೊಳ್ಳುವಂತೆ ಆಗ್ರಹ ಕೇಳಿ ಬಂದಿತ್ತು.

    ಈ ವಿಚಾರಕ್ಕೆ ಸಂಬಂಧಿಸಿ ಸೋಶಿಯಲ್ ಮೀಡಿಯಾದಲ್ಲಿ ನಿಖಿಲ್ ಕುಮಾರ್ ಅವರು ಸ್ಪಷ್ಟನೆ ನೀಡಿದ್ದಾರೆ. ‘ಇದು ಸತ್ಯಕ್ಕೆ ದೂರವಾದುದ್ದು’ ಎಂದು ಅವರು ಹೇಳಿದ್ದಾರೆ. ಜೊತೆಗೆ ಸಂಬಂಧ ಪಟ್ಟ ಅಧಿಕಾರಿಗಳು ಇದನ್ನು ಪರಿಶೀಲಿಸಬಹುದು ಎಂದು ಸೋಶಿಯಲ್​​ ಮೀಡಿಯಾದಲ್ಲಿ ಬರೆದುಕೊಂಂಡಿದ್ದಾರೆ.

    ಟ್ವೀಟರ್​ನಲ್ಲಿ ಏನಿದೆ?:  ತಮ್ಮ ಮದುವೆ ಸಮಯದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದರು ಎಂದು ಕೆಲ ಮಾಧ್ಯಮಗಳಲ್ಲಿ ವರದಿ ಮಾಡಲಾಗಿದೆ. ಇದು ಸತ್ಯಕ್ಕೆ ದೂರ. ವನ್ಯಜೀವಿ ಸಂರಕ್ಷಣಾ ಕಾಯ್ದೆ, ಅದರ ಗಂಭೀರತೆ ಬಗ್ಗೆ ನನಗೆ ಖಂಡಿತಾ ಅರಿವಿದೆ.

    ನಾನು ಧರಿಸಿದ್ದ ಹುಲಿ ಉಗುರು ಮಾದರಿಯ ಪೆಂಡೆಂಟ್ ಕೃತಕವಾದದ್ದೇ ಹೊರತು ನೈಜವಾದುದ್ದಲ್ಲ. ಅದನ್ನು ನನ್ನ ಮದುವೆ ಸಮಯದಲ್ಲಿ ಉಡುಗೋರೆ ನೀಡಿದ್ದು. ಅದು ಈಗಲೂ ನನ್ನ ಬಳಿ ಇದೆ. ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಬಹುದು. ದಯಮಾಡಿ ಯಾರೂ ಸತ್ಯಕ್ಕೆ ದೂರವಾದ ಸುದ್ದಿಗಳನ್ನು ಪ್ರಸಾರ ಮಾಡಬಾರದು ಎಂದು ವಿನಂತಿ ಮಾಡಿಕೊಳ್ಳುತ್ತೇನೆಂದು ಟ್ವೀಟ್​​​ ಮಾಡಿದ್ದಾರೆ.

    ಉಗುರು ಧರಿಸಿದ್ದಕ್ಕೆ ಬಿಗ್​ ಬಾಸ್​ ಸ್ಪರ್ಧಿ ವರ್ತೂರ್ ಸಂತೋಷ್ ಬಂಧನದ ಬೆನ್ನಲ್ಲೇ ಹಲವರು ಹುಲಿ ಉಗುರಿನ ಲಾಕೆಟ್​ ಧರಿಸಿಕೊಂಡಿದ್ದು, ಇದೀಗ ಅವರ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ವರ್ತೂರ್ ಸಂತೋಷ್​ ಪ್ರಕರಣದ ಬೆನ್ನಲ್ಲೇ ರಾಜ್ಯಾದ್ಯಂತ ಹುಲಿ ಉಗುರು ಭಾರೀ ಸದ್ದು ಮಾಡುತ್ತಿದೆ.

    ನಟ ದರ್ಶನ್, ಜಗ್ಗೇಶ್, ನಿರ್ಮಾಪಕ ರಾಕ್​ಲೈನ್​ ವೆಂಕಟೇಶ್ ಸೇರಿ ಅನೇಕರ ಕತ್ತಿನಲ್ಲಿ ಹುಲಿ ಉಗುರು ಇರುವ ಪೆಂಡೆಂಟ್ ಕಂಡಿದೆ. ಇವರಲ್ಲಿ ಯಾರ್ಯಾರು ಧರಿಸಿದ್ದು ನಿಜವಾದುದ್ದು, ಯಾರ್ಯಾರು ಧರಿಸಿದ್ದು ಡುಪ್ಲಿಕೇಟ್ ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ.

    ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ ಅಡಿಯಲ್ಲಿ: ಯಾವುದೇ ವನ್ಯ ಜೀವಿಗೆ ಸಂಬಂಧಿಸಿದ ವಸ್ತುಗಳು, ಅಂದರೆ ಚರ್ಮ, ಮೂಳೆ. ಕೊಂಬು, ಕೂದಲು ಇತ್ಯಾದಿ ವಸ್ತುಗಳ ಸಂಗ್ರಹ ತಪ್ಪು. ಅಂತಹ ಸಂಗ್ರಹಗಳಿದ್ದರೆ ಕೂಡಲೇ ಇಲಾಖೆಗೆ ಒಪ್ಪಿಸಬೇಕು. ಇಲ್ಲವೇ ಇಲಾಖೆಯಿಂದ ಸೂಕ್ತ ಪ್ರಮಾಣ ಪತ್ರ ಪಡೆಯಬೇಕು. ಅಕ್ರಮ ಎಂದು ಸಾಬೀತಾದರೆ 3 ರಿಂದ 7 ವರ್ಷ ಜೈಲು ಮತ್ತು ಕನಿಷ್ಠ 10000 ರೂ ದಂಡ ವಿಧಿಸುವ ಸಾಧ್ಯತೆ ಇದೆ.

    ಹುಲಿ ಉಗುರು ಪ್ರಕರಣ; ನಟ ಜಗ್ಗೇಶ್​ ವಿರುದ್ಧ ದೂರು ದಾಖಲು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts