More

    ಜಮೀನುಗಳಲ್ಲಿ ಹುಲಿ ಹೆಜ್ಜೆ ಪತ್ತೆ

    ಎಚ್.ಡಿ.ಕೋಟೆ: ತಾಲೂಕಿನ ಶಾಂತಿಪುರ (ಹೆಬ್ಬಳ್ಳ) ಗ್ರಾಮದ ಜಮೀನುಗಳಲ್ಲಿ ಹುಲಿಯ ಹೆಜ್ಜೆ ಗುರುತುಗಳು ಕಂಡುಬಂದಿದ್ದು, ಶಾಂತಿಪುರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರು ಆತಂಕಗೊಂಡಿದ್ದಾರೆ.

    ಹುಲಿ ಗ್ರಾಮದ ಜಮೀನುಗಳಲ್ಲೇ ಬೀಡು ಬಿಟ್ಟಿರುವ ಬಗ್ಗೆ ಶಂಕೆ ವ್ಯಕ್ತವಾಗುತ್ತಿದ್ದು, ಹುಲಿಯನ್ನು ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.
    ಶುಕ್ರವಾರ ಶಾಂತಿಪುರ ಗ್ರಾಮದ ನಂಜುಂಡಸ್ವಾಮಿ ಎಂಬ ರೈತ ಜಮೀನಿಗೆ ತೆರಳಿದ್ದ ಸಂದರ್ಭದಲ್ಲಿ ಹುಲಿಯ ಹೆಜ್ಜೆ ಗುರುತು ಕಂಡು ಆತಂಕ ವ್ಯಕ್ತಪಡಿಸಿದ್ದಾರೆ.

    ಹುಲಿ ಹೆಜ್ಜೆ ಗುರುತನ್ನು ಕಂಡು ಆತಂಕಕೊಳಗಾಗಿರುವ ಗ್ರಾಮಸ್ಥರು ಅರಣ್ಯ ಇಲಾಖೆಗೆ ಕರೆ ಮಾಡಿ, ವಿಷಯ ತಿಳಿಸಿದರೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ, ಸ್ಥಳಕ್ಕೂ ಬಂದಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

    ಕಳೆದ ಒಂದು ತಿಂಗಳಿನಿಂದ ಹುಲಿ ಮತ್ತು ಆನೆ ದಾಳಿಗೆ ತಾಲೂಕಿನಲ್ಲಿನ ಸಾವು-ನೋವುಗಳಾಗುತ್ತಿವೆ. ಆದ್ದರಿಂದ ಅರಣ್ಯ ಇಲಾಖೆ ಮುಂಜಾಗ್ರತಾ ಕ್ರಮ ಅನುಸರಿಸಿ ಹುಲಿಯನ್ನು ಸೆರೆಹಿಡಿದು ಮುಂದಾಗುವ ಅನಾಹುತವನ್ನು ತಪ್ಪಿಸಬೇಕು ಎಂದು ಗ್ರಾಮಸ್ಥರು ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts