ಕಲಾದಗಿ: ವಿದ್ಯಾರ್ಥಿಗಳು ಸಮಯ ಪಾಲನೆಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್. ಬಡದಾನಿ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಇಲ್ಲಿನ ಹಣ್ಣುಬೆಳೆಗಾರರ ವಿದ್ಯಾಸಂಸ್ಥೆಯಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗಾಗಿ ಮಂಗಳವಾರ ಆಯೋಜಿಸಿದ್ದ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸಮಯದ ಮೌಲ್ಯಅರ್ಥಮಾಡಿಕೊಂಡಾಗ ಮಾತ್ರ ಜೀವನದಲ್ಲಿ ಏನನ್ನಾದರೂ ಸಧಿಸಲು ಸಾಧ್ಯ ಎಂದು ತಿಳಿಸಿದರು.
ಬಿ.ಇ.ಒ ಕಚೇರಿ ಅಧಿಕಾರಿ ಎಚ್.ಕೆ. ಗುಡೂರ, ಬಿ.ಎನ್. ಲಚ್ಯಾಣ, ಸಜ್ಜನ್, ಶ್ರೀಗುರುಲಿಂಗೇಶ್ವರ ಪ್ರೌಢಶಾಲೆ ಮುಖ್ಯಶಿಕ್ಷಕ ಎಸ್.ವಿ. ಲಮಾಣಿ, ಹಣ್ಣು ಬೆಳೆಗಾರರ ವಿದ್ಯಾಸಂಸ್ಥೆ ಮುಖ್ಯಶಿಕ್ಷಕ ಆರ್.ವಿ. ಜಾಧವ, ಶ್ರೀಕಾಂತ ಕೆರಕಲಮಟ್ಟಿ ಇದ್ದರು.