More

    ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ ಕಾಲಾವಕಾಶ ; ಪಶುವೈದ್ಯ ಕೇಂದ್ರ ಸ್ಥಳಾಂತರ ಅರ್ಜಿ ವಿಚಾರಣೆ

    ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯ ವಿವಿಧೆಡೆ 28 ಪಶುವೈದ್ಯ ಕೇಂದ್ರ ಸ್ಥಳಾಂತರ ಮಾಡುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ವಿಚಾರಣೆ ನಡೆಸಿದ ಹೈಕೋರ್ಟ್, ಈ ಕುರಿತು ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ 2 ವಾರಗಳ ಗಡುವು ನೀಡಿದೆ. ಅನಿಮಲ್ ರೈಟ್ಸ್ ಫಂಡ್ ಹಾಗೂ ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಮತ್ತಿತರರು ಪ್ರತ್ಯೇಕವಾಗಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ಸೋಮವಾರ ಮುಖ್ಯ ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಹಾಗೂ ನ್ಯಾಯಮೂರ್ತಿ ಶಿವಶಂಕರೇಗೌಡ ಅವರ ವಿಭಾಗೀಯ ಪೀಠದ ಮುಂದೆ ಬಂದಿತ್ತು.

    ಈ ವೇಳೆ ಅರ್ಜಿದಾರರ ಪರ ವಕೀಲರು, ನಗರದಲ್ಲಿ ಪ್ರತಿ ನಿತ್ಯ 600-700 ಸಾಕು ಪ್ರಾಣಿಗಳು ಅನಾರೋಗ್ಯಕ್ಕೆ ಒಳಗಾಗುತ್ತಿದ್ದು, ಅವುಗಳಿಗೆ ಅಗತ್ಯವಾಗಿ ಚಿಕಿತ್ಸೆ ನೀಡಬೇಕಿದೆ. ಹೀಗಿರುವಾಗ ಪಶು ವೈದ್ಯಕೀಯ ಆಸ್ಪತ್ರೆ ಸ್ಥಳಾಂತರಿಸಿರುವುದರಿಂದ ಸ್ಥಳೀಯ ರೈತರು ತಮ್ಮ ಪಶುಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸುವ ಸ್ಥಿತಿ ಬಂದೊದಗಲಿದೆ.

    ಇದು ಸಾಮಾನ್ಯ ರೈತರನ್ನು ಸಂಕಷ್ಟಕ್ಕೀಡು ಮಾಡುತ್ತದೆ. ಈ ಕಾರಣಕ್ಕಾಗಿ ಪಶು ಚಿಕಿತ್ಸಾಲಯ ಸ್ಥಳಾಂತರ ಆದೇಶ ರದ್ದುಪಡಿಸಬೇಕು ಎಂದು ಮನವಿ ಮಾಡಿದರು. ಸರ್ಕಾರದ ಪರ ವಕೀಲರು ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಬೇಕಾಗಿ ಮನವಿ ಮಾಡಿದರು. ಇದಕ್ಕೆ ಪ್ರತಕ್ರಯಿಸಿದ ನ್ಯಾಯಪೀಠ, ಆಕ್ಷೇಪಣೆ ಸಲ್ಲಿಸಲು 2 ವಾರಗಳ ಕಾಲವಕಾಶ ನೀಡುವುದಾಗಿ ತಿಳಿಸಿ ವಿಚಾರಣೆಯನ್ನೂ ೆ.19ಕ್ಕೆ ಮುಂದೂಡಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts