More

    ವಿದ್ಯಾರ್ಥಿ ಜೀವನದಲ್ಲಿ ಸಮಯ ಅಮೂಲ್ಯ

    ಹಿರೇಕೆರೂರ: ಏಕಾಗ್ರತೆ ಮತ್ತು ಆಸಕ್ತಿಯಿಂದ ನಿರೀಕ್ಷಿತ ಫಲಿತಾಂಶ ಪಡೆಯಲು ಸಾಧ್ಯ. ವಿದ್ಯಾರ್ಥಿ ಜೀವನದಲ್ಲಿ ಸಿಗುವಂತಹ ಅವಕಾಶ ಸಂಪೂರ್ಣವಾಗಿ ಸದ್ಬಳಕೆ ಮಾಡಿಕೊಂಡರೆ ಗುರಿ ಸಾಧನೆಯ ಹಾದಿ ಸುಗಮವಾಗುತ್ತದೆ ಎಂದು ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯಂಜಯ ಸ್ವಾಮೀಜಿ ಹೇಳಿದರು.

    ಪಟ್ಟಣದ ವೀರರಾಣಿ ಕಿತ್ತೂರು ಚನ್ನಮ್ಮ ಸಭಾಭವನದಲ್ಲಿ ತಾಲೂಕು ಲಿಂಗಾಯತ ಪಂಚಮಸಾಲಿ ಸಮಾಜದ ವತಿಯಿಂದ ಭಾನುವಾರ ಏರ್ಪಡಿಸಿದ್ದ ತಾಲೂಕಿನ ಸಮಾಜದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಹಾಗೂ ಶಾಸಕರ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

    ವಿದ್ಯಾರ್ಥಿ ಜೀವನದಲ್ಲಿ ಸಮಯ ಅತ್ಯಂತ ಅಮೂಲ್ಯವಾದದ್ದು. ವಿದ್ಯಾರ್ಥಿಗಳು ಯಾವುದೇ ಕಾರ್ಯವನ್ನು ಒತ್ತಾಯ ಪೂರ್ವಕವಾಗಿ ಮಾಡಬಾರದು. ಅದರಿಂದ ಪರಿಪೂರ್ಣತೆ ಸಾಧಿಸಲು ಸಾಧ್ಯವಿಲ್ಲ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರಕಿಸಿಕೊಡಲು ಪೋಷಕರು ಕಷ್ಟಪಡುತ್ತಾರೆ. ಇದನ್ನು ಅರಿತು ಮಕ್ಕಳು ಶೈಕ್ಷಣಿಕ ಪ್ರಗತಿ ಸಾಧಿಸಬೇಕು ಎಂದರು.

    ಶಾಸಕ ಯು.ಬಿ. ಬಣಕಾರ ಮಾತನಾಡಿ, ಕಲಿಕೆಗೆ ಸೃಜನಶೀಲತೆಯ ಅಗತ್ಯವಿದೆ. ದೈನಂದಿನ ಜೀವನದಲ್ಲಿನ ಸವಾಲುಗಳನ್ನು ಎದುರಿಸಲು ಸೃಜನಶೀಲತೆ ಪ್ರಮುಖ ಪಾತ್ರ ವಹಿಸುತ್ತದೆ. ಸೃಜನಾತ್ಮಕತೆಯು ಪ್ರಾಯೋಗಿಕ ಚಿಂತನೆಯ ಸಾಮರ್ಥ್ಯಗಳ ಅಭಿವೃದ್ಧಿಯಲ್ಲಿ ಸಹಾಯ ಮಾಡುತ್ತದೆ. ಹೀಗಾಗಿ ಮಕ್ಕಳನ್ನು ಸೃಜನಾತ್ಮಕವಾಗಿ ಯೋಚಿಸಲು ಪ್ರೋತ್ಸಾಹಿಸುವುದು ಅಗತ್ಯವಾಗಿದೆ ಎಂದರು.

    ರಟ್ಟಿಹಳ್ಳಿ ಕಬ್ಬಿಣಕಂತಿ ಮಠದ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣಕ್ಕೆ ಕೊಡುವಷ್ಟೇ ಮಹತ್ವವನ್ನು ಜೀವನದ ಮೌಲ್ಯಗಳಿಗೂ ಕೊಡಬೇಕು ಎಂದರು.

    ತಿಪ್ಪಾಯಿಕೊಪ್ಪದ ಮೂಕಪ್ಪ ಶಿವಯೋಗಿಗಳ ಮಠದ ಮಹಾಂತ ಸ್ವಾಮೀಜಿ ಮಾತನಾಡಿ, ದೇಶದ ಭವಿಷ್ಯ ವಿದ್ಯಾರ್ಥಿಗಳ ಕೈಯಲ್ಲಿದೆ. ಈ ದಿಸೆಯಲ್ಲಿ ವಿದ್ಯಾರ್ಥಿಗಳು ದೇಶಪ್ರೇಮ ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮುಗಿದ ನಂತರ ಸಮಾಜದ ಬಗ್ಗೆ ಕಳಕಳಿ ಬೆಳೆಸಿಕೊಂಡು ಸಮಾಜ ಮತ್ತು ದೇಶವನ್ನು ಅಭಿವದ್ಧಿ ಪಥದತ್ತ ಮುನ್ನಡೆಸಲು ಕೈಜೋಡಿಸಬೇಕು ಎಂದರು.

    ತಾಲೂಕು ಪಂಚಮಸಾಲಿ ಸಮಾಜದ ಅಧ್ಯಕ್ಷ ಎಂ.ಎಂ. ಹುಲ್ಮನಿ ಅಧ್ಯಕ್ಷತೆ ವಹಿಸಿದ್ದರು. ಡಾ.ನಿಂಗಪ್ಪ ಚಳಗೇರಿ, ಕಂಠಾಧರ ಅಂಗಡಿ, ರುದ್ರಮನಿ ಹುಲ್ಮನಿ, ರುದ್ರಗೌಡ ಪಾಟೀಲ, ಎಸ್.ಆರ್. ಅಂಗಡಿ, ನೀಲಮ್ಮ ಹೊಸಮನಿ, ಶೋಭಾ ಅಂಗಡಿ, ಪರಮೇಶಪ್ಪ ಹಲಗೇರಿ, ಎಂ.ಜಿ. ಈಶ್ವರಗೌಡ್ರ, ಎನ್.ಎಸ್. ಹೆಗ್ಗೇರಿ, ಎಂ.ಡಿ. ಸೀಮಿಕೇರಿ ಹಾಗೂ ವಿದ್ಯಾರ್ಥಿಗಳು ಮತ್ತು ಸಮಾಜದವರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts