More

    ಹಾಪ್‌ಕಾಮ್ಸ್‌ಗಳಲ್ಲಿ ಮಾರಾಟ ಸಮಯ ನಿಗದಿ

    ಉಡುಪಿ: ಕರೊನಾ ಲಾಕ್‌ಡೌನ್ ಹಿನ್ನೆಲೆಯಲ್ಲಿ ಸರ್ಕಾರದ ಆದೇಶದಂತೆ ಹಾಪ್‌ಕಾಮ್ಸ್ ರೈತರಿಂದ ಹಣ್ಣು ಮತ್ತು ತರಕಾರಿ ಖರೀದಿಸಿ ಗ್ರಾಹಕರಿಗೆ ಮಾರಾಟ ಮಾಡಲಿದೆ.

    ಉಡುಪಿ ನಗರ, ಉಪ್ಪುಂದ ಹಾಗೂ ಕಾರ್ಕಳ ಆಸ್ಪತ್ರೆ ಆವರಣದಲ್ಲಿರುವ ಹಾಪ್‌ಕಾಮ್ಸ್ ಮಳಿಗೆಗಳಲ್ಲಿ ಬೆಳಗ್ಗೆ 7ರಿಂದ ರಾತ್ರಿ 7ರ ತನಕ ಹಣ್ಣು ಮತ್ತು ತರಕಾರಿ ಮಾರಾಟ ಮಾಡಲು ಜಿಲ್ಲಾಧಿಕಾರಿ ಜಿ.ಜಗದೀಶ್ ಅನುಮತಿ ನೀಡಿದ್ದಾರೆ. ಮಾರಾಟ ಮಾಡುವ ಹಣ್ಣು ಮತ್ತು ತರಕಾರಿಗಳು ಗುಣಮಟ್ಟ ಹೊಂದಿರಬೇಕು ಹಾಗೂ ನೈಜ ದರಗಳಲ್ಲೇ ಮಾರಾಟ ಮಾಡಬೇಕು. ಹಣ್ಣು ಮತ್ತು ತರಕಾರಿಗಳ ದರಪಟ್ಟಿ ಮಳಿಗೆಯಲ್ಲಿ ಪ್ರದರ್ಶಿಸಬೇಕು. ಪ್ರತಿದಿನ ಜಿಲ್ಲೆ ಹಾಗೂ ಹೊರಜಿಲ್ಲೆಗಳಿಂದ ಖರೀದಿಸಿದ ಹಣ್ಣು ಮತ್ತು ತರಕಾರಿಗಳ ವಿವರಗಳನ್ನು ತೋಟಗಾರಿಕಾ ಉಪನಿರ್ದೇಶಕರಿಗೆ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

    ಬಾಡಿಗೆ ವಸೂಲಿ ಮಾಡಿದರೆ ಪರವಾನಗಿ ರದ್ದು: ಕಾರ್ಮಿಕರ ಶೆಡ್ ಹಾಗೂ ಬಾಡಿಗೆ ಮನೆಗಳಲ್ಲಿ ಮಾಲೀಕರು ಬಾಡಿಗೆದಾರರಿಂದ ಮಾರ್ಚ್ ಹಾಗೂ ಏಪ್ರಿಲ್ ತಿಂಗಳ ಬಾಡಿಗೆ ಶುಲ್ಕ ವಸೂಲು ಮಾಡದಂತೆ ಎಚ್ಚರಿಕೆ ನೀಡಲಾಗಿದೆ. ಮನೆ ಮಾಲೀಕರು ಬಾಡಿಗೆ ವಸೂಲಿ ಮಾಡುತ್ತಿರುವ ಬಗ್ಗೆ ದೂರುಗಳು ಬರುತ್ತಿವೆ. ಸರ್ಕಾರದ ಆದೇಶ ಉಲ್ಲಂಘಿಸಿದವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಅವರಿಗೆ ಸ್ಥಳೀಯ ಸಂಸ್ಥೆ ವತಿಯಿಂದ ನೀಡಲಾಗಿರುವ ಮನೆ ಅಥವಾ ಶೆಡ್ ಪರವಾನಗಿ ರದ್ದುಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts