More

    ವಿದ್ಯುತ್ ಕಂಬಕ್ಕೆ ಟಿಪ್ಪರ್ ಡಿಕ್ಕಿ

    ಬೆಳ್ತಂಗಡಿ: ಹೆದ್ದಾರಿ ಕಾಮಗಾರಿಗೆ ಮಣ್ಣು ಸಾಗಿಸುತ್ತಿದ್ದ ಸಂದರ್ಭ ಗುತ್ತಿಗೆದಾರ ಕಂಪನಿಯ ಟಿಪ್ಪರ್ ಲಾರಿ ಡಿಕ್ಕಿಯಾಗಿ ವಿದ್ಯುತ್ ಕಂಬ ಮುರಿದ ಘಟನೆ ಸೋಮಂತಡ್ಕ ಸಮೀಪದ ಅಂಬಡ್ತ್ಯಾರು ಎಂಬಲ್ಲಿ ಭಾನುವಾರ ನಡೆದಿದೆ.

    ಅಂಬಡ್ತ್ಯಾರಿನಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ಈ ಸಂದರ್ಭ ಮಣ್ಣು ಸಾಗಿಸುತ್ತಿದ್ದ ಲಾರಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಘಟನೆ ಪರಿಣಾಮ ಮುಂಡಾಜೆ ಗ್ರಾಮದ ಹಲವೆಡೆ ಸಂಜೆ ತನಕ ವಿದ್ಯುತ್ ವ್ಯತ್ಯಯ ಉಂಟಾಗಿತ್ತು. ಬಳಿಕ ಮೆಸ್ಕಾಂ ಇಲಾಖೆ ಸೂಚನೆ ಅನ್ವಯ ಹೆದ್ದಾರಿ ಗುತ್ತಿಗೆದಾರ ಕಂಪನಿ ಹೊಸ ಕಂಬ ಅಳವಡಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts