More

    ಧಾರವಾಡದಲ್ಲಿ ಭೀಕರ ಅಪಘಾತ, 13 ಮಂದಿ ಸಾವು: ಸಂತಾಪ ಸೂಚಿಸಿದ ಪ್ರಧಾನಿ

    ಬೆಂಗಳೂರು: ಧಾರವಾಡ ಹೊರವಲಯದ ಇಟ್ಟಿಗಟ್ಟಿ ಬಳಿ ಶುಕ್ರವಾರ ಬೆಳ್ಳಂಬೆಳಗ್ಗೆ ಸಂಭವಿಸಿದ ಟೆಂಪೋ ಟ್ರಾವೆಲರ್​ ಮತ್ತು ಟಿಪ್ಪರ್​ ಲಾರಿ ನಡುವಿನ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

    ಟೆಂಪೋ ಟ್ರಾವೆಲರ್‌ನಲ್ಲಿ ಗೋವಾ ಪ್ರವಾಸಕ್ಕೆ ಹೊರಟ್ಟಿದ್ದ ದಾವಣಗೆರೆ ಮೂಲದ 16 ಮಹಿಳೆಯರ ಪೈಕಿ 12 ಮಂದಿ ದುರ್ಮರಣಕ್ಕೀಡಾಗಿದ್ದಾರೆ. ಇವರ ಜತೆಗೆ ಟಿಟಿ ಚಾಲಕನೂ ಸತ್ತಿದ್ದಾನೆ. ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿರಿ ವರ್ಷಗಳ ನಂತರ ಒಟ್ಟಿಗೆ ಗೋವಾಕ್ಕೆ ಹೊರಟಿದ್ದ ಶಾಲಾ ಗೆಳತಿಯರ ದುರಂತ ಅಂತ್ಯ! ಮನಕಲಕುತ್ತೆ ಕೊನೇ ವಾಟ್ಸ್​ಆ್ಯಪ್​ ಸ್ಟೇಟಸ್

    ಈ ದುರಂತ ಸಾವಿಗೆ ಮರುಕ ವ್ಯಕ್ತಪಡಿಸಿರುವ ಪ್ರಧಾನಿ, ‘ಕರ್ನಾಟಕದ ಧಾರವಾಡ ಜಿಲ್ಲೆಯಲ್ಲಿ ಇಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತರಾದವರ ಬಗ್ಗೆ ಸಂತಾಪ ಸೂಚಿಸುವೆ. ಈ ಸಂದರ್ಭದಲ್ಲಿ ದುಃಖತಪ್ತ ಕುಟುಂಬಗಳ ನೋವಿನಲ್ಲಿ ನಾನೂ ಭಾಗಿ. ಅಪಘಾತದಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸುವೆ’ ಎಂದು ಟ್ವೀಟ್​ ಮಾಡಿದ್ದಾರೆ.

    ವರ್ಷಗಳ ನಂತರ ಒಟ್ಟಿಗೆ ಗೋವಾಕ್ಕೆ ಹೊರಟಿದ್ದ ಶಾಲಾ ಗೆಳತಿಯರ ದುರಂತ ಅಂತ್ಯ! ಮನಕಲಕುತ್ತೆ ಕೊನೇ ವಾಟ್ಸ್​ಆ್ಯಪ್​ ಸ್ಟೇಟಸ್

    ಈ ಒಂದು ನಿರ್ಧಾರವೇ ದುರಂತ ಸಾವಿಗೆ ಕಾರಣವಾಯ್ತಾ? ಮೃತರ ಸಂಬಂಧಿ ಗೋಳಾಟ

    ಧಾರವಾಡದಲ್ಲಿ ಭೀಕರ ಅಪಘಾತ! 13ಕ್ಕೇರಿದ ಸಾವಿನ ಸಂಖ್ಯೆ, ಮಾಜಿ ಶಾಸಕರ ಸೊಸೆಯೂ ದುರ್ಮರಣ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts