More

  ಟಿಪ್ಪರ್ ಲಾರಿ ಡಿಕ್ಕಿಯಾಗಿ ಬೈಕ್‌ನ ಹಿಂಬದಿ ಸವಾರ ಸಾವು

  ಹಾವೇರಿ: ಟಿಪ್ಪರ್ ಲಾರಿ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನ ಹಿಂಬದಿ ಸವಾರ ಮೃತಪಟ್ಟ ಘಟನೆ ನಗರದ ಹಳೆ ಪಿ.ಬಿ. ರಸ್ತೆಯಲ್ಲಿ ಗುರುವಾರ ನಡೆದಿದೆ.
  ಇಲ್ಲಿಯ ನಾಗೇಂದ್ರನಮಟ್ಟಿಯ ನಿವಾಸಿ ಮಹ್ಮದಗೌಸ ಕಮಾಲಸಾಬ ಗುತ್ತಲ (65) ಮೃತ ವ್ಯಕ್ತಿ.
  ಇವರು ಬೈಕ್ ಮೇಲೆ ಹೊಸಮನಿ ಸಿದ್ದಪ್ಪ ವೃತ್ತದ ಕಡೆಗೆ ತೆರಳುತ್ತಿದ್ದ ಸಮಯದಲ್ಲಿ ಟಿಪ್ಪರ್ ಲಾರಿ ಚಾಲಕ ಹಿಂದಿನಿಂದ ಬಂದು ಡಿಕ್ಕಿ ಹೊಡೆದಿದ್ದಾನೆ. ಇದರಿಂದ ಗಂಭೀರವಾಗಿ ಗಾಯಗೊಂಡ ಮಹ್ಮದಗೌಸ್ ಅವರನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್‌ಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts