25.1 C
Bangalore
Friday, December 6, 2019

ಜಯಂತಿ ವಿರೋಧಿಸಿ ಪ್ರತಿಭಟನೆ

Latest News

ಹಂಪಿ ವಿವಿ ಕೇಂದ್ರ ಸ್ಥಳಾಂತರ ಕೈಬಿಡಿ

ಬಾದಾಮಿ: ಬನಶಂಕರಿಯಲ್ಲಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯದ ಕೇಂದ್ರವನ್ನು ಸ್ಥಳಾಂತರ ಮಾಡಬಾರದು ಎಂದು ಆಗ್ರಹಿಸಿ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಪಟ್ಟಣದಲ್ಲಿ ಮಾಜಿ ಮುಖ್ಯಮಂತ್ರಿ...

ಅವೈಜ್ಞಾನಿಕ ಉಳುಮೆಯಿಂದ ಮಣ್ಣಿನ ಸವಕಳಿ, ಹೊಸಪೇಟೆ ಕೃಷಿ ಇಲಾಖೆ ಡಿಡಿ ಸಹದೇವ ಯರಗುಪ್ಪ ಹೇಳಿಕೆ

ಕೂಡ್ಲಿಗಿ: ರೈತರ ಜೀವನಕ್ಕೆ ಆಧಾರವಾಗಿರುವ ಮಣ್ಣಿನ ಸಂರಕ್ಷಣೆ ಮಾಡಬೇಕಾದ ಅಗತ್ಯವಿದೆ ಎಂದು ಕೃಷಿ ಇಲಾಖೆ ಹೊಸಪೇಟೆ ವಿಭಾಗದ ಉಪನಿರ್ದೇಶಕ ಸಹದೇವ ಯರಗುಪ್ಪ ಹೇಳಿದರು. ಪಟ್ಟಣದ...

ಮಲಗಿದ ಮೇಲೆ ಸಂಪೂರ್ಣ ಸುಖ ನಿದ್ದೆಗೆ ಇಲ್ಲಿವೆ ಕೆಲ ಟಿಪ್ಸ್​ಗಳು

ಸಂಪುರ್ಣ ಎಂಟು ತಾಸು ನಿದ್ದೆ..! - ನಿದ್ದೆ ಮಾಡಿದ ಮೇಲೆ ಮಧ್ಯೆ ಯಾವುದಕ್ಕೂ ಅಂದರೆ ಬಾತ್​ರೂಂಗೆ ಹೋಗಲು, ನೀರು ಕುಡಿಯಲು, ನಿಮ್ಮ ಮೊಬೈಲ್​ ಚೆಕ್​ ಮಾಡಲು...

ಗೊರಗುದ್ದಿ ಶಾಲೆ ಗೋಳು ಕೇಳೋರಿಲ್ಲ

|ಬೆಳ್ಳೆಪ್ಪ ಮ.ದಳವಾಯಿ ಕಡಬಿ ಸರ್ಕಾರ ಸರ್ವಶಿಕ್ಷಣ ಅಭಿಯಾನದ ಹಲವು ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿದೆ. ಅಲ್ಲದೆ ಆ ಯೋಜನೆಗಳಿಗೆ ಸರ್ಕಾರ ಕೋಟ್ಯಂತರ ರೂ.ಹಣ ಖರ್ಚು...

ಅತ್ಯಾಚಾರ ಆರೋಪಿಗಳ ಎನ್​ಕೌಂಟರ್​ ಬಗ್ಗೆ ಇಂಚಿಂಚು ಮಾಹಿತಿ ಬಿಚ್ಚಿಟ್ಟ ಪೊಲೀಸ್​ ಆಯುಕ್ತ ವಿಶ್ವನಾಥ್​ ಸಜ್ಜನರ್​

ಹೈದರಾಬಾದ್​: ಪಶುವೈದ್ಯೆಯ ಮೇಲೆ ಅತ್ಯಾಚಾರವೆಸಗಿ, ಕೊಲೆಗೈದು ಮೃತದೇಹಕ್ಕೆ ಬೆಂಕಿಯಿಟ್ಟು ಕ್ರೂರತ್ವ ಮೆರೆದಿದ್ದ ನಾಲ್ವರು ಆರೋಪಿಗಳನ್ನು ಹೈದರಾಬಾದ್​ ಪೊಲೀಸರು ಶುಕ್ರವಾರ ಬೆಳ್ಳಂಬೆಳಗ್ಗೆ ಎನ್​ಕೌಂಟರ್​ ಮೂಲಕ...

ಬಾಗಲಕೋಟೆ: ರಾಜ್ಯದಲ್ಲಿ ಸರ್ಕಾರದಿಂದ ಟಿಪ್ಪು ಜಯಂತಿ ಆಚರಣೆ ಮಾಡಬಾರದು ಎಂದು ಆಗ್ರಹಿಸಿ ಶ್ರೀರಾಮ ಸೇನೆ ಜಿಲ್ಲಾ ಘಟಕದ ಕಾರ್ಯಕರ್ತರು ಜಿಲ್ಲಾಡಳಿತ ಭವನ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾಡಳಿತ ಭವನಕ್ಕೆ ಆಗಮಿಸಿದ ಶ್ರೀರಾಮ ಸೇನೆ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೊಷಣೆ ಕೂಗಿದರು. ನಂತರ ಜಿಲ್ಲಾಡಳಿತ ಮೂಲಕ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು.

ಟಿಪ್ಪು ತನ್ನ ಆಡಳಿತ ಅವಧಿಯಲ್ಲಿ ಹಿಂದುಗಳ ಮೇಲೆ ದೌರ್ಜನ್ಯ ನಡೆಸಿದ್ದಾನೆ. ಮತಾಂಧನಾಗಿ ಅನೇಕರಿಗೆ ಕಿರುಕುಳ ನೀಡಿದ್ದಾನೆ. ದೇಶಕ್ಕಾಗಿ ಹೋರಾಟ ಮಾಡಿಲ್ಲ. ಸ್ವಾರ್ಥಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ್ದಾನೆ. ಹೀಗಾಗಿ ಸರ್ಕಾರ ಯಾವುದೇ ಕಾರಣಕ್ಕೂ ಟಿಪ್ಪು ಜಯಂತಿ ಆಚರಣೆಗೆ ಮುಂದಾಗಬಾರದು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಶ್ರೀರಾಮ ಸೇನೆಯ ಜಿಲ್ಲಾಧ್ಯಕ್ಷ ಆನಂದ ಜಂಬಗಿಮಠ ಮಾತನಾಡಿ, ಈ ಹಿಂದಿನ ಕಾಂಗ್ರೆಸ್ ಸರ್ಕಾರ ಟಿಪ್ಪು ಜಯಂತಿ ಘೊಷಿಸಿದಾಗ ರಾಜ್ಯದಲ್ಲಿ ಅಶಾಂತಿ ಉಂಟಾಗಿತ್ತು. ಜಯಂತಿ ವಿರೋಧಿಸಿ ರಾಜ್ಯಾದ್ಯಂತ ವ್ಯಾಪಕ ಪ್ರತಿಭಟನೆಗಳು ನಡೆದಿವೆ. ಕೋಮುಗಲಭೆಗೆ ಕಾರಣವಾಗುವ ಟಿಪ್ಪು ಜಯಂತಿ ಆಚರಣೆ ಮಾಡಬಾರದು. ಟಿಪ್ಪು ಸುಲ್ತಾನ್ ಒಬ್ಬ ಮತಾಂಧನಾಗಿ ದೇವಸ್ಥಾನ ಒಡೆದು ಮಸೀದಿ ಕಟ್ಟಿಸಿದನು. ಹಿಂದುಗಳ ಮಾರಣಹೋಮ ನಡೆಸಿದ್ದ ಎನ್ನುವುದರ ಕುರಿತು ಇತಿಹಾಸದ ಪುಟಗಳಲ್ಲಿ ದಾಖಲಾಗಿದೆ. ಜನರ ತೆರಿಗೆ ಹಣವನ್ನು ಇಂತಹ ಅರ್ಥಹೀನ ಟಿಪ್ಪು ಜಯಂತಿ ಕಾರ್ಯಕ್ರಮಕ್ಕೆ ವ್ಯಯಿಸುವುದು ಖಂಡನಾರ್ಹ ಎಂದು ದೂರಿದರು.

ಈ ಹಿಂದಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮಾಡಿರುವ ತಪ್ಪನ್ನು ಸಿಎಂ ಎಚ್.ಡಿ.ಕುಮಾರಸ್ವಾಮಿ ನೇತೃತ್ವ ಸಮ್ಮಿಶ್ರ ಸರ್ಕಾರ ಮಾಡಬಾರದು. ಟಿಪ್ಪು ಜಯಂತಿಗೆ ಸಂಪೂರ್ಣ ವಿರೋಧವಿದೆ. ಸರ್ಕಾರ ಕೂಡಲೇ ಟಿಪ್ಪು ಜಯಂತಿ ಆಚರಣೆ ಹಿಂಪಡೆಯಬೇಕು. ಇಲ್ಲವಾದಲ್ಲಿ ಉಗ್ರವಾಗಿ ಪ್ರತಿಭಟನೆ ನಡೆಸಲಾಗುವುದು ಎಂದು ಶ್ರೀರಾಮ ಸೇನೆ ಕಾರ್ಯಕರ್ತರು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಶ್ರೀರಾಮ ಸೇನೆಯ ತಾಲೂಕು ಅಧ್ಯಕ್ಷ ರಾಜು ಪಾಟೀಲ, ರಮೇಶ ಬಂಡಿವಡ್ಡರ ಸೇರಿದಂತೆ ಇತರರು ಇದ್ದರು.

Stay connected

278,739FansLike
580FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...