ಈ ಬಾರಿ ನಾಟಕೀಯ ಟಿಪ್ಪು ಜಯಂತಿ

ಶಿವಮೊಗ್ಗ: ಟಿಪ್ಪು ಜಯಂತಿ ಸಂದರ್ಭದಲ್ಲಿ ಒಬ್ಬರಿಗೆ ಆರೋಗ್ಯ ಸರಿ ಇರಲ್ಲ. ಮತ್ತೊಬ್ಬರು ವಿದೇಶಕ್ಕೆ ಹೋಗುತ್ತಾರೆ ಎಂದು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಬಗ್ಗೆ ಶಾಸಕ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ.

ಟಿಪ್ಪು ಜಯಂತಿ ಈ ವರ್ಷ ಕೇವಲ ನಾಟಕೀಯವಾಗಿ ಆಚರಣೆಯಾಗಿದೆ. ಟಿಪ್ಪು ಜಯಂತಿಗೆ ಸಿಎಂ ಹಾಗೂ ಡಿಸಿಎಂ ಗೈರಾಗಿರುವುದು ಮುಸ್ಲಿಂ ಸಮುದಾಯಕ್ಕೆ ಮಾಡಿದ ಅಪಮಾನ ಎಂದು ಕಾಂಗ್ರೆಸ್ ಮುಖಂಡ ತನ್ವೀರ್ ಸೇಠ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇನ್ನೂ ಏನೇನು ಆಗಲಿದೆಯೋ ಕಾದುನೋಡಬೇಕು ಎಂದರು.

ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಟಿಪ್ಪು ಜಯಂತಿ ಮಾಡೋಕೆ ಹೋಗಿ ಸಿದ್ದರಾಮಯ್ಯ ಹಾಳಾಗಿ ಹೋದ್ರು. ಇನ್ನು ಈ ಸರ್ಕಾರಕ್ಕೆ ಏನಾಗುವುದೋ ನೋಡಬೇಕು. ಟಿಪ್ಪು ಬಗ್ಗೆ ಮಾತನಾಡಿದ ಪತ್ರಕರ್ತ ಸಂತೋಷ್ ತಮ್ಮಯ್ಯ ಅವರನ್ನು ಬಂಧಿಸಿದ್ದು ದೊಡ್ಡ ತಪ್ಪು ಎಂದು ಹೇಳಿದರು.

ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರು, ಉಪಾಧ್ಯಕ್ಷರ ಆಯ್ಕೆ ವಿಚಾರದಲ್ಲಿ ಸರ್ಕಾರ ವಿನಾಕಾರಣ ವಿಳಂಬ ನೀತಿ ಅನುಸರಿಸುತ್ತಿದೆ ಎಂದು ಈಶ್ವರಪ್ಪ ಅಸಮಾಧಾನ ವ್ಯಕ್ತಪಡಿಸಿದರು.