More

    ಲೋಕಸಮರ ಗೆಲ್ಲಲು ಸನ್ನದ್ಧರಾಗಲು ಸಲಹೆ

    ಬಾಗಲಕೋಟೆ: ಮುಂಬರುವ ಲೋಕಸಭೆ ಚುನಾವಣೆ ಲೋಕಸಮರದಲ್ಲಿ ಬಾಗಲಕೋಟೆ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿನ ನಾಗಾಲೋಟ ಮುಂದುವರಿಸಲು, ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳನ್ನು ಸಂಪರ್ಕಿಸುವುದು ಹಾಗೂ ಪಕ್ಷದ ವಿವಿಧ ಅಭಿಯಾನಗಳನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಕಾರ್ಯಕರ್ತರನ್ನು ಸನ್ನದ್ದುಗೊಳಿಸುವ ನಿಟ್ಟಿನಲ್ಲಿ ಭಾನುವಾರ ನಗನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಸಭೆ ನಡೆಯಿತು.

    ಪಕ್ಷದ ಮುಖಂಡರು, ಚುನಾವಣೆ ಉಸ್ತುವಾರಿಗಳು ಹಾಗೂ ಕಾರ್ಯಕರ್ತರು ಸಭೆಯಲ್ಲಿ ಪಾಲ್ಗೊಂಡಿದ್ದರು. ಜಿಲ್ಲೆಯಿಂದ ಅಯೋಧ್ಯೆಗೆ ಹೊರಟಿದ್ದ 388 ಬಿಜೆಪಿ ಹಾಗೂ ಹಿಂದು ಕಾರ್ಯಕರ್ತರಿಗೆ ಶುಭ ಹಾರೈಸಲಾಯಿತು.

    ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಮುಂದುವರಿಸಲು ಕಾರ್ಯಕರ್ತರು ಹೆಚ್ಚೆಚ್ಚು ಗಮನ ಹರಿಸಬೇಕು. ಬೂತ್ ಮಟ್ಟದಲ್ಲಿ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಮುಖ್ಯವಾಗಿ ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಮನೆ ಮನೆಗೆ ಮನದಟ್ಟು ಮಾಡಬೇಕು. ಯೋಜನೆಗಳ ಫಲಾನುಭವಿಗಳನ್ನು ಸಂಪರ್ಕಿಸಬೇಕು. ಗೋಡೆ ಬರಹ ಸೇರಿ ಪಕ್ಷದ ವಿವಿಧ ಅಭಿಯಾನಗಳನ್ನು ಯಶಸ್ವಿಗೊಳಿಸಬೇಕು ಎನ್ನುವ ಸಲಹೆಯನ್ನು ಮುಖಂಡರು ನೀಡಿದರು.

    ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ, ಬೆಳಗಾವಿ ವಿಭಾಗದ ಪ್ರಭಾರಿ ಚಂದ್ರಶೇಖರ ಕವಟಗಿ, ಸಂಘಟನಾ ಕಾರ್ಯದರ್ಶಿ ಪ್ರಕಾಶ ಅಕ್ಕಲಕೋಟೆ, ಬಾಗಲಕೋಟೆ ಲೋಕಸಭೆ ಕ್ಷೇತ್ರದ ಉಸ್ತುವಾರಿ ಲಿಂಗರಾಜ್ ಪಾಟೀಲ, ಮಾಜಿ ಸಚಿವ ಮುರುಗೇಶ ನಿರಾಣಿ, ಸಂಸದ ಪಿ.ಸಿ.ಗದ್ದಿಗೌಡರ, ಶಾಸಕ ಸಿದ್ದು ಸವದಿ, ವಿಧಾನ ಪರಿಷತ್ ಸದಸ್ಯರಾದ ಪಿ.ಎಚ್.ಪೂಜಾರ, ಹಣಮಂತ ನಿರಾಣಿ, ಮಾಜಿ ಸಚಿವ ಮುರುಗೇಶ ನಿರಾಣಿ, ಜಿಪಂ ಮಾಜಿ ಅಧ್ಯಕ್ಷ ಹೂವಪ್ಪ ರಾಠೋಡ, ಬಸವರಾಜ ಯಂಕಂಚಿ ಸೇರಿ ಅನೇಕ ಪ್ರಮುಖರು ಸಭೆಯಲ್ಲಿ ಇದ್ದರು.

    ಪ್ರಮುಖರ ಗೈರು

    ಸಭೆಯಲ್ಲಿ ಜಮಖಂಡಿ ಶಾಸಕ ಜಗದೀಶ ಗುಡಗುಂಟಿ, ಮಾಜಿ ಸಚಿವ ಗೋವಿಂದ ಕಾರಜೋಳ, ಮಾಜಿ ಶಾಸಕರಾದ ವೀರಣ್ಣ ಚರಂತಿಮಠ, ದೊಡ್ಡನಗೌಡ ಪಾಟೀಲ, ಎಂ.ಕೆ.ಪಟ್ಟಣಶೆಟ್ಟಿ ಸೇರಿ ಹಲವು ಮುಂಚೂಣಿ ಮುಖಂಡರು ಗೈರು ಇದ್ದಿದ್ದು ಎದ್ದು ಕಂಡಿತು.

    ರೈಲು ನಿಲ್ದಾಣದಲ್ಲಿ ಕಾರ್ಯಕರ್ತರ ಬೀಳ್ಕೊಡುಗೆ

    ಜಿಲ್ಲೆಯಿಂದ ಅಯೋಧ್ಯೆ ರಾಮಮಂದಿರಕ್ಕೆ ಹೊರಟಿದ್ದ ಜಿಲ್ಲೆಯ ಪಕ್ಷದ ಕಾರ್ಯಕರ್ತರಿಗೆ ಸಭೆಯಲ್ಲಿ ಅಭಿನಂದಿಸಲಾಯಿತು. ಬಾಗಲಕೋಟೆ ರೈಲು ನಿಲ್ದಾಣದಲ್ಲಿ ಅವರನ್ನು ಬೀಳ್ಕೊಡಲಾಯಿತು. ಸಭೆಯಲ್ಲಿ ಗೈರು ಇದ್ದ ಮಾಜಿ ಶಾಸಕ ವೀರಣ್ಣ ಚರಂತಿಮಠ ರೈಲು ನಿಲ್ದಾಣದಲ್ಲಿ ಕಾರ್ಯಕರ್ತರಿಗೆ ಶುಭಹಾರೈಸಿದರು. ಮುಂಬರುವ ದಿನಗಳಲ್ಲಿ ಅಯೋಧ್ಯೆಯಲ್ಲೂ ಶ್ರೀಶೈಲ ಮಾದರಿಯಲ್ಲಿ ಬಿವಿವಿ ಸಂಘದಿಂದ ಅನ್ನಛತ್ರ ಆರಂಭಿಸುವ ಭರವಸೆ ನೀಡಿದ ವೀರಣ್ಣ ಚರಂತಿಮಠ, ಅಯೋಧ್ಯೆಗೆ ತೆರಳುವ ಈ ಭಾಗದ ಜನರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts