ಹುಬ್ಬಳ್ಳಿಯಲ್ಲಿ ತಿರಂಗಾ ಯಾತ್ರೆ

ಹುಬ್ಬಳ್ಳಿ : ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಹಮ್ ಭಾರತಿ ಫೌಂಡೇಶನ್, ಚಿನ್ಮಯ ಪದವಿ ಹಾಗು ಪದವಿ ಪೂರ್ವ ಮಹಾವಿದ್ಯಾಲಯ ಸಂಯುಕ್ತ ಆಶ್ರಯದಲ್ಲಿ ನಗರದಲ್ಲಿ ಸೋಮವಾರ ತಿರಂಗ ಯಾತ್ರೆ ಹಮ್ಮಿಕೊಳ್ಳಲಾಗಿತ್ತು.

ಚಿನ್ಮಯ ಮಹಾವಿದ್ಯಾಲಯದಿಂದ ಪ್ರಾರಂಭಗೊಂಡ ತಿರಂಗಾ ಯಾತ್ರೆಯಲ್ಲಿ ಪಾಲ್ಗೊಂಡಿದ್ದು ನೂರಾರು ವಿದ್ಯಾರ್ಥಿಗಳು, 21 ಅಡಿ ಉದ್ದ ಹಾಗೂ 14 ಅಡಿ ಅಗಲದ ಬೃಹತ್ ರಾಷ್ಟ್ರಧ್ವಜವನ್ನು ಹಿಡಿದು, ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿದರು. ಭಾರತ ಮಾತಾ ಕೀ ಜೈ, ವಂದೇ ಮಾತರಂ ಜಯ ಘೋಷಣೆಗಳನ್ನು ಕೂಗಿದರು. ವಿದ್ಯಾರ್ಥಿಗಳು ದೇಶಭಕ್ತಿ ಗೀತೆ ಹಾಡಿದರು. ಚನ್ನಮ್ಮ ವೃತ್ತದಲ್ಲಿ ರಾಷ್ಟ್ರಗೀತೆ ಹಾಡುವ ಮೂಲಕ ಯಾತ್ರೆ ಸಂಪನ್ನಗೊಳಿಸಿದರು.

ಹಮ್ ಭಾರತಿ ಫೌಂಡೇಶನ್ ಅಧ್ಯಕ್ಷ ಅನ್ವರ ಮುಲ್ಲಾ ಮಾತನಾಡಿ, ಸ್ವಾತಂತ್ರ್ಯ ದಿನಾಚರಣೆ ಹಾಗೂ ಗಣರಾಜ್ಯೋತ್ಸವಗಳು ದೇಶದ ಪ್ರಮುಖ ಹಬ್ಬಗಳು. ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿ, ಅವರ ತ್ಯಾಗ, ಬಲಿದಾನವನ್ನು ಮಕ್ಕಳಿಗೆ ಮನವರಿಕೆ ಮಾಡುವ ಉದ್ದೇಶದಿಂದ ತಿರಂಗಾ ಯಾತ್ರೆ ಆಯೋಜಿಸಲಾಗುತ್ತಿದೆ. 2011 ರಿಂದ ಇದುವರೆಗೆ ಯಾತ್ರೆ ಆಯೋಜಿಸುತ್ತ ಬಂದಿರುವ ಏಕೈಕ ಕಾಲೇಜು ಇದಾಗಿದೆ ಎಂದರು.

ಹರ್ ಘರ್ ಅಭಿಯಾನದಡಿ ಪ್ರತಿ ಪರಿವಾರ ತಮ್ಮ ಮನೆಯ ಮೇಲೆ ಧ್ವಜಾರೋಹಣ ಮಾಡಿ, ಮಕ್ಕಳಿಗೆ ಸ್ವಾತಂತ್ರ್ಯ ಹೋರಾಟದ ಬಗ್ಗೆ ಅರಿವು ಮೂಡಿಸಬೇಕು ಎಂದು ಸಲಹೆ ನೀಡಿದರು.

ಇದಕ್ಕೂ ಮೊದಲು ಪತ್ರಕರ್ತರಾದ ಗೋಪಾಲಕೃಷ್ಣ ಹೆಗಡೆ ಹಾಗೂ ರಾಜು ವಿಜಾಪುರ ಅವರು ತಿರಂಗಾ ಯಾತ್ರೆಗೆ ಚಾಲನೆ ನೀಡಿದರು.

ಚಿನ್ಮಯ ಶಿಕ್ಷಣ ಸಮಿತಿ ಅಧ್ಯಕ್ಷ ಸಿಎ ಗಿರೀಶ ಉಪಾಧ್ಯಾಯ, ಧರ್ಮದರ್ಶಿಗಳಾದ ಪಾಂಡುರಂಗ ನಾಯ್ಡು, ಆರ್.ಎನ್ ಮೂರ್ತಿ, ಆಡಳಿತಾಧಿಕಾರಿ ವಿಶ್ವನಾಥ ರಾನಡೆ, ಪ್ರಾಚಾರ್ಯ ವಿನಾಯಕ ಬಿ.ಕೆ., ಹಮ್ ಭಾರತಿ ಫೌಂಡೇಶನ್ ಸದಸ್ಯರಾದ ಅಶೋಕ ತೆಲಗಾರ, ಇಮ್ತಿಯಾಜ ಮುಲ್ಲಾ, ಷಣ್ಮುಖ ಕೋಳುರ, ಮಲ್ಲಿಕಾರ್ಜುನ ತೊಟಗಿ ಹಾಗೂ ಇತರರು ಇದ್ದರು. ಉಪನ್ಯಾಸಕ ಮಲ್ಲನಗೌಡ ಪಾಟೀಲ ನಿರೂಪಿಸಿದರು.

Share This Article

ಒಂದು ತಿಂಗಳು ಬೇಳೆಕಾಳುಗಳನ್ನು ತಿನ್ನೋದು ಬಿಟ್ಟರೆ ಏನಾಗುತ್ತೆ ಗೊತ್ತಾ? ಇಲ್ಲಿದೆ ಉಪಯುಕ್ತ ಮಾಹಿತಿ….

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…

ಪೋಷಕರೇ ಹುಷಾರ್‌! ಅಪ್ಪಿತಪ್ಪಿಯೂ ಮಕ್ಕಳ ಮುಂದೆ ಪೋಷಕರು ಈ ಕೆಲಸಗಳನ್ನು ಮಾಡಬೇಡಿ

 ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…

ನಿಮ್ಮ ಅಂಗೈನಲ್ಲಿ ಮೀನಿನ ಚಿಹ್ನೆ ಇದ್ರೆ ಏನಾಗುತ್ತೆ ಗೊತ್ತಾ? ಇಲ್ಲಿದೆ ನೋಡಿ ಅಚ್ಚರಿಯ ಸಂಗತಿ…

ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…