More

    ಅನಾರೋಗ್ಯಕ್ಕೆ ಬೇಸತ್ತು ಯುವಕ ಆತ್ಮಹತ್ಯೆ

    ರಾವಂದೂರು: ಅನಾರೋಗ್ಯದಿಂದ ಬೇಸತ್ತು ಯುವಕನೊಬ್ಬ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪಿರಿಯಾಪಟ್ಟಣ ತಾಲೂಕಿನ ಹೊನ್ನೇನಹಳ್ಳಿ ಗ್ರಾಮದ ನಾಗ ಅವರ ಮಗ ಸುನಿಲ್ (25) ಮೃತರು.
    ಎಳನೀರು ವ್ಯಾಪಾರ ಮಾಡಿಕೊಂಡಿದ್ದ ಗುರುವಾರ ಮಧ್ಯಾಹ್ನ ಹರೀಶ್ ಎಂಬುವವರ ಬೈಕಿನಲ್ಲಿ ರಾವಂದೂರಿಗೆ ಹೋಗಿ ಬರುತ್ತೇನೆ ಎಂದು ಹೇಳಿ ಹೋದವನು ಸಂಜೆಯಾದರೂ ಮನೆಗೆ ಬರಲಿಲ್ಲ. ಆದರೆ ಶುಕ್ರವಾರ ಬೆಳಗ್ಗೆ ರಾವಂದೂರು ಗ್ರಾಮದ ಕಾಳಿಕಾಂಬ ದೇವಾಲಯದ ಆವರಣದಲ್ಲಿ ಹರೀಶ್ ಮೃತದೇಹ ಪತ್ತೆಯಾಗಿತ್ತು. ಸ್ಥಳಕ್ಕೆ ಸರ್ಕಲ್ ಇನ್‌ಸ್ಪೆಕ್ಟರ್ ರಾಘವೇಂದ್ರ, ಪಿಎಸ್‌ಐ ಆಕಾಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನು ಪಾಲಕರಿಗೆ ಹಸ್ತಾಂತರಿಸಲಾಯಿತು. ಈತನಿಗೆ ಕೆಲವು ದಿನಗಳ ಹಿಂದೆ ಅನಾರೋಗ್ಯದ ನಿಮಿತ್ತ ಚಿಕಿತ್ಸೆ ನೀಡಲಾಗಿತ್ತು. ಆದರೂ ನೋವು ತಡೆಯಲಾಗುತ್ತಿರಲಿಲ್ಲ. ಇದರಿಂದ ಬೇಸತ್ತು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಂದೆ ನಾಗ ದೂರಿನಲ್ಲಿ ತಿಳಿಸಿದ್ದಾರೆ. ಈ ಸಂಬಂಧ ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts