More

    ಕೆರೆ ತುಂಬಿಸುವ ಯೋಜನೆ ವಿಳಂಬಕ್ಕೆ ಬೇಸರ

    ಜಗಳೂರು: ತಾಲೂಕಿನ 57 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ನಿಗದಿತ ಸಮಯಕ್ಕೆ ಮುಗಿಸದೆ ಅಧಿಕಾರಿಗಳು ವಿಳಂಬ ಮಾಡುತ್ತಿದ್ದಾರೆ ಎಂದು ಶಾಸಕ ಚಿಕ್ಕಮ್ಮನಹಟ್ಟಿ ಬಿ. ದೇವೇಂದ್ರಪ್ಪ ಸದನದಲ್ಲಿ ಬೇಸರ ವ್ಯಕ್ತಪಡಿಸಿದರು.

    ಬೆಂಗಳೂರಿನ ವಿಧಾನಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಗುರುವಾರ ಮಾತನಾಡಿ, ರಾಜ್ಯದಲ್ಲೇ ಜಗಳೂರು ಅತ್ಯಂತ ಹಿಂದುಳಿದ ತಾಲೂಕು. ಯಾವೊಂದು ನೀರಾವರಿ, ಕಾರ್ಖಾನೆಗಳಿಲ್ಲ. ಈ ಭಾಗಕ್ಕೆ ನೀರಾವರಿ ಯೋಜನೆ ಅವಶ್ಯಕವಾಗಿದೆ ಎಂದರು.

    ಈಗಾಗಲೇ 2013ರಲ್ಲಿ ಸಿಎಂ ಆಗಿದ್ದ ಸಿದ್ದರಾಮಯ್ಯನವರು ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಅನುಷ್ಠಾನಗೊಳಿಸಿದ್ದರು. ಸಿರಿಗೆರೆ ಜಗದ್ಗುರುಗಳ ಆಶಯದಂತೆ 665 ಕೋಟಿ ರೂ. ವೆಚ್ಚದ ಹರಿಹರ ಬಳಿ ತುಂಗಭದ್ರಾ ನದಿಯಿರುವ ದೀಟೂರು ಏತ ನೀರಾವರಿ ಯೋಜನೆಗೆ ಬಜೆಟ್‌ನಲ್ಲಿ ಹಣ ಮೀಸಲಿಟ್ಟರು. ಯೋಜನೆ ಆರಂಭವಾಗಿ ಹಲವು ವರ್ಷಗಳೇ ಕಳೆದಿವೆ. 2023 ಬಂದರೂ ಕಾಮಗಾರಿ ಪೂರ್ಣಗೊಂಡಿಲ್ಲ ಎಂದು ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗಳ ವಿರುದ್ಧ ದೂರಿದರು.

    ಜವಾನನನ್ನು ವಿಧಾನ ಸೌಧಕ್ಕೆ ಕಳಿಸಿದ ಜನ: ಕಾಂಗ್ರೆಸ್ ಟಿಕೆಟ್ ಕೊಡುವ ವೇಳೆ ಕೆಲವರು ಜವಾನನಿಗೆ ಟಿಕೆಟ್ ಕೊಟ್ಟರೆ ಕ್ಷೇತ್ರದ ಅಭಿವೃದ್ಧಿ ಅಸಾಧ್ಯ ಎಂದು ಅಪಪ್ರಚಾರ ಮಾಡಿದರು. ಆದರೆ, ಜನ ನನ್ನ ಮೇಲೆ ಭರವಸೆಯಿಟ್ಟು ವಿಧಾನಸಭೆಗೆ ಆಯ್ಕೆ ಮಾಡಿ ಕಳುಹಿಸಿದ್ದಾರೆ.

    ಹೀಗಾಗಿ, ಕ್ಷೇತ್ರದ ಅಭಿವೃದ್ಧಿಯಾಗೆ 57 ಕೆರೆ ಏತ ಕಾಮಗಾರಿ ಪೂರ್ಣಗೊಂಡರೆ ಮಾತ್ರ ಸಾಧ್ಯ. ಇನ್ನು ಏಳು ಕಿಮೀ ಪೈಪ್‌ಲೈನ್ ಕಾಮಗಾರಿ ಬಾಕಿ ಉಳಿದಿದೆ. ಅದು ಪೂರ್ಣಗೊಂಡರೆ 34 ಕೆರೆಗಳಿಗೆ ನೀರು ಹರಿಸಬಹುದು. ನೀರಾವರಿ ನಿಗಮದ ಅಧಿಕಾರಿಗಳು ಕಾಮಗಾರಿಗೆ ತುರ್ತಾಗಿ ಪೂರ್ಣಗೊಳಿಸಬೇಕಿದೆ ಎಂದು ಸಭಾಧ್ಯಕ್ಷರಿಗೆ ಮನವಿ ಮಾಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts