ತಿಮ್ಮಪ್ಪ ದರ್ಶನಕ್ಕೆ ಆನ್‌ಲೈನ್ ಟಿಕೆಟ್​ ಬುಕ್ಕಿಂಗ್: ನೋಂದಣಿಗೆ ಕಡಿಮೆ ಕಾಲಾವಕಾಶ!​

ತಿರುಪತಿ: ತಿರುಪತಿ ತಿಮ್ಮಪ್ಪನ ದರ್ಶನಕ್ಕಾಗಿ ಭಕ್ತರಿಗೆ ಅನುಕೂಲವಾಗುವಂತೆ ಆರ್ಜಿತ ಸೇವಾ ಟಿಕೆಟ್ ಗಳನ್ನು ಬಿಡುಗಡೆ ಮಾಡಲಾಗಿದೆ.

ಇದನ್ನೂ ಓದಿ: ರೊಮ್ಯಾಂಟಿಕ್​ ಫೋಟೋಗಳನ್ನು ಶೇರ್​ ಮಾಡಿ, ವಿಘ್ನೇಶ್ ಶಿವನ್‌ಗೆ ವಿಶ್ ಮಾಡಿದ ನಯನತಾರಾ! ಏನೇಳಿದ್ರಂದ್ರೆ..

ಡಿಸೆಂಬರ್ ತಿಂಗಳಲ್ಲಿ ಭೇಟಿ ನೀಡುವ ಭಕ್ತರಿಗೆ ಆನ್‌ಲೈನ್ ಟಿಕೆಟ್​ ಬುಕ್ಕಿಂಗ್​ ಕೋಟಾವನ್ನು ಬಿಡುಗಡೆ ಮಾಡಲಾಗಿದೆ. ಸೆ.20(ಶುಕ್ರವಾರ)ರಂದು ಬೆಳಗ್ಗೆ 10ರವರೆಗೆ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ.

ಕಲ್ಯಾಣೋತ್ಸವ, ಆರ್ಜಿತ ಬ್ರಹ್ಮೋತ್ಸವ, ಊಂಜಾಲ್ ಸೇವೆ, ಸಹಸ್ರ ದೀಪಾಲಂಕಾರ ಸೇವಾ ಟಿಕೆಟ್‌ಗಳನ್ನು ಇದೇ 21 ರಂದು ಬೆಳಿಗ್ಗೆ 10 ಗಂಟೆಗೆ ಆನ್‌ಲೈನ್‌ನಲ್ಲಿ ಬಿಡುಗಡೆ ಮಾಡಲಾಗುತ್ತದೆ. ಅದೇ ದಿನ ಮಧ್ಯಾಹ್ನ 3 ಗಂಟೆಗೆ ವರ್ಚುವಲ್ ಸೇವಾ ಟಿಕೆಟ್‌ಗಳನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ತಿರುಪತಿ-ತಿರುಮಲ ದೇವಸ್ಥಾನಂ ಸಮಿತಿ(ಟಿಟಿಡಿ) ತಿಳಿಸಿದೆ.

23 ರಂದು ಬೆಳಗ್ಗೆ 10 ಗಂಟೆಗೆ ಅಂಗಪ್ರದಕ್ಷಿಣೆ ಟೋಕನ್​ಗಳು, 11 ಗಂಟೆಗೆ ಶ್ರೀವಾಣಿ ಟ್ರಸ್ಟ್ ಬ್ರೇಕ್ ದರ್ಶನಂ ಕೋಟಾ ಬಿಡುಗಡೆಯಾಗಲಿದೆ. ವೃದ್ಧರು, ದೀರ್ಘಕಾಲದ ಅಸ್ವಸ್ಥರು ಮತ್ತು ಅಂಗವಿಕಲರಿಗೆ ಉಚಿತ ವಿಶೇಷ ಪ್ರವೇಶ ದರ್ಶನ ಟೋಕನ್‌ಗಳ ಕೋಟಾವನ್ನು ಮಧ್ಯಾಹ್ನ 3 ಗಂಟೆಗೆ ಬಿಡುಗಡೆ ಮಾಡಲಾಗುತ್ತದೆ ಎಂದು ಟಿಟಿಡಿ ತಿಳಿಸಿದೆ.

ಇನ್ನು 24 ರಂದು ಬೆಳಿಗ್ಗೆ 10 ಗಂಟೆಗೆ ಡಿಸೆಂಬರ್ 300 ರ ವಿಶೇಷ ಪ್ರವೇಶ ದರ್ಶನ ಟಿಕೆಟ್‌ಗಳು, ಮಧ್ಯಾಹ್ನ 3 ಗಂಟೆಗೆ ತಿರುಮಲ ಮತ್ತು ತಿರುಪತಿಯಲ್ಲಿ ಬಾಡಿಗೆ ಕೊಠಡಿಗಳ ಬುಕಿಂಗ್ ಕೋಟಾವನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಟಿಟಿಡಿ ಪ್ರಕಟಣೆಯಲ್ಲಿ ವಿವರಿಸಿದೆ.

ಮಿಯಾಮಿ ನೈಟ್​ಕ್ಲಬ್​ನಲ್ಲಿ ಶಕೀರಾಗೆ ಹೊಸ ಅನುಭವ..ಫ್ಯಾನ್ಸ್​ ಕಾಟಕ್ಕೆ ಬೆಚ್ಚಿದ ಗಾಯಕಿ ಮಾಡಿದ್ದೇನು?

Share This Article

ಗಂಟಲಲ್ಲಿ ಮೀನಿನ ಮುಳ್ಳು ಸಿಲುಕಿಕೊಂಡ್ರೆ ಏನು ಮಾಡ್ಬೇಕು? ಇಲ್ಲಿದೆ ನೋಡಿ ಸಿಂಪಲ್​ ಟಿಪ್ಸ್​ | Fish

ಮೀನು ( Fish ) ಗಳು ಅನೇಕ ಜನರ ನೆಚ್ಚಿನ ಆಹಾರಗಳಲ್ಲಿ ಒಂದಾಗಿದೆ. ಮೀನು ಆರೋಗ್ಯಕ್ಕೆ…

ಒಂದು ಕೈಯಲ್ಲಿ ಫೋನ್ ಹಿಡಿದುಕೊಂಡು ಸ್ಕ್ರೋಲಿಂಗ್ ಮಾಡ್ತೀರಾ?  ಇದ್ರಿಂದಲೇ ಗೊತ್ತಾಗುತ್ತದೆ ನಿಮ್ಮ Personality traits…

ಬೆಂಗಳೂರು:  ಈಗ  ಕೆಲವು ಅಧ್ಯಯನಗಳು ಒಬ್ಬ ವ್ಯಕ್ತಿಯ ವ್ಯಕ್ತಿತ್ವವನ್ನು (Personality traits ) ಹುಟ್ಟಿದ ದಿನಾಂಕ, ಕಣ್ಣಿನ…

Salt Water : ಪ್ರತಿದಿನ ಬೆಳಗ್ಗೆ ಉಗುರು ಬೆಚ್ಚನೆಯ ನೀರಿನಲ್ಲಿ ಉಪ್ಪು ಹಾಕಿ ಕುಡಿದರೆ ಏನಾಗುತ್ತೆ ಗೊತ್ತಾ?

ಬೆಂಗಳೂರು: ನಾವು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ನೀರು ಕುಡಿಯುವ ಅಭ್ಯಾಸ ಬೆಳೆಸಿಕೊಳ್ಳುವುದು ತುಂಬಾ…

ಈ ಸುದ್ದಿಗಳನ್ನೂ ಮಿಸ್​ ಮಾಡ್ಬೇಡಿ