17.8 C
Bengaluru
Wednesday, January 22, 2020

ತಿರುಪತಿ ಲಡ್ಡು ತಯಾರಿಕಾ ಕೇಂದ್ರದಲ್ಲಿ ಬೆಂಕಿ; ಅವಘಡದಲ್ಲಿ ಹಾನಿಯಾಗಿಲ್ಲ ಎಂದ ದೇಗುಲದ ಅಧಿಕಾರಿ

Latest News

ಮುರುಘಾಮಠದ ಕಾರ್ಯ ನಾಡಿಗೆ ಮಾದರಿ

ಧಾರವಾಡ: ಜ್ಞಾನ, ದಾಸೋಹ ಸೇವೆಯಲ್ಲಿ ಮುರುಘಾಮಠದ ಮೃತ್ಯುಂಜಯ ಅಪ್ಪಗಳ ಹಾಗೂ ಮಹಾಂತಪ್ಪಗಳ ಕೊಡುಗೆ ಸ್ಮರಣೀಯ. ಅವರ ಆಶಯದಂತೆ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಶ್ರೀಮಠವನ್ನು...

ಶರಣರಿಂದ ಸಾಮಾಜಿಕ ನ್ಯಾಯ

ಬ್ಯಾಡಗಿ: 12ನೇ ಶತಮಾನದಿಂದಲೂ ಶಿವಶರಣರು ಸಾಮಾಜಿಕ ಮೌಢ್ಯತೆ ಹಾಗೂ ಧೋರಣೆಗಳ ವಿರುದ್ಧ ಹೋರಾಟ ನಡೆಸಿದ ಪರಿಣಾಮ ಸರ್ವರಿಗೂ ಸಾಮಾಜಿಕ ನ್ಯಾಯ ಸಿಕ್ಕಿದೆ ಎಂದು...

ಗಾಳಿಪಟ ಉತ್ಸವಕ್ಕೆ ತೆರೆ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪೋಷಿತ ಕ್ಷಮತಾ ಸೇವಾ ಸಂಸ್ಥೆ ಆಶ್ರಯದಲ್ಲಿ ನಗರದ ಕುಸುಗಲ್ಲ ರಸ್ತೆಯಲ್ಲಿ ಆಯೋಜಿಸಿದ್ದ ಎರಡು ದಿನಗಳ...

ಎಲ್ಲರನ್ನೂ ಪ್ರೀತಿ, ಗೌರವದಿಂದ ಕಾಣಿ

ರಟ್ಟಿಹಳ್ಳಿ: ಸಮಾಜದಲ್ಲಿ ಎಲ್ಲರನ್ನೂ ಪ್ರೀತಿ ಮತ್ತು ಗೌರವದಿಂದ ಕಂಡರೆ ಎಲ್ಲರ ಮನಸ್ಸು ಗೆಲ್ಲಬಹುದು. ಯಾವುದೇ ವ್ಯಕ್ತಿ ಅಥವಾ ಸಮಾಜದ ವಿರುದ್ಧ ದ್ವೇಷ ಸಾಧಿಸಬಾರದು....

12ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ 27ರಿಂದ

ಹಾವೇರಿ: ಜಿಲ್ಲಾ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ 12ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಜ. 27 ಹಾಗೂ 28ರಂದು...

ತಿರುಪತಿ (ಆಂಧ್ರಪ್ರದೇಶ): ವಿಶ್ವವಿಖ್ಯಾತ ಭಕ್ತಿ ಕೇಂದ್ರ ತಿರುಪತಿ ತಿರುಮಲದ ಲಡ್ಡು ತಯಾರಿಕಾ ಕೇಂದ್ರದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು ಅದೃಷ್ಟವಶಾತ್​ ಯಾವುದೇ ಹಾನಿಯಾಗಿಲ್ಲ.

ತಿರುಮಲ ಬಾಲಾಜಿ ದೇಗುಲದ ಸಮೀಪದ ಲಡ್ಡು ತಯಾರಿಕಾ ಕೇಂದ್ರದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.

ತಕ್ಷಣ ಅಗ್ನಿ ಶಾಮಕ ಸಿಬ್ಬಂದಿ ಕಾರ್ಯಾಚರಣೆ ಆರಂಭಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.

ಬೆಂಕಿ ಲಡ್ಡು ತಯಾರಿಸುವಾಗ ಹತ್ತಿಕೊಂಡಿದೆ. ಅಲ್ಲಿನ ಕೆಲಸಗಾರ ತುಪ್ಪದ ಕ್ಯಾನ್​ನಿಂದ ಬಾಣಲೆಗೆ ತುಪ್ಪ ಸುರಿಯುವಾಗ ಆಗಿರುವ ಅವಘಡವಿದು. ಆತನ ಕೈಯಲ್ಲಿದ್ದ ತುಪ್ಪದ ಕ್ಯಾನ್​ ಜಾರಿ ಸ್ವವ್​ ಮೇಲೆ ಬಿದ್ದಿದೆ. ಆಗ ಬೆಂಕಿ ಆವರಿಸಿದೆ ಎಂದು ದೇಗುಲದ ಅಧಿಕಾರಿ ಹರೀಂದ್ರನಾಥ್​ ತಿಳಿಸಿದ್ದಾರೆ.

ಬೆಂಕಿಯು ಸ್ವವ್​ ಉರಿಯುತ್ತಿದ್ದ ಎಲ್ಲ ಕಡೆ ಪಸರಿಸಿದೆ. ಇದರಿಂದ ಕೆಲ ಕಾಲ ಹೊಗೆ ಆವರಿಸಿಕೊಂಡಿತ್ತು. ತಕ್ಷಣ ಸಿಬ್ಬಂದಿ ಅದನ್ನು ಆರಿಸಿದ್ದಾರೆ. ಇದರಿಂದ ಯಾರಿಗೂ ಹಾನಿಯಾಗಿಲ್ಲ ಎಂದು ಅವರು ತಿಳಿಸಿದರು.

ಅವಘಢದ ನಂತರ ಲಡ್ಡು ತಯಾರಿಸುತ್ತಿದ್ದ 20ಕ್ಕೂ ಹೆಚ್ಚು ಸ್ಟವ್​ಗಳನ್ನು ಬಂದ್​ ಮಾಡಲಾಗಿತ್ತು. ನಂತರ ಬೆಂಕಿ ಬಿದ್ದ ಸ್ಥಳವನ್ನು ಸ್ವಚ್ಛಗೊಳಿಸಲಾಯಿತು. ಎಲ್ಲ ಸರಿ ಹೋದ ಮೇಲೆ ಮತ್ತೆ ಲಡ್ಡು ತಯಾರಿಕೆಯನ್ನು ಮುಂದುವರಿಸಲಾಗಿದೆ. (ಏಜೆನ್ಸಿಸ್​)

ವಿಡಿಯೋ ನ್ಯೂಸ್

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...