

ಅಮರಾವತಿ: ತಿರುಪತಿ ದೇವಸ್ಥಾನದ ಲಡ್ಡು ಪ್ರಸಾದ ವಿವಾದದ ಕುರಿತು ಆಂಧ್ರಪ್ರದೇಶದ ಮಾಜಿ ಸಿಎಂ ಜಗನ್ ರೆಡ್ಡಿ ಅವರು ಪ್ರಧಾನಿ ಮೋದಿಗೆ ಪತ್ರ ಬರೆದಿದ್ದು, ಸುಳ್ಳುಗಳನ್ನು ಹಬ್ಬಿಸುತ್ತಿರುವ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಅವರಿಗೆ ಛೀಮಾರಿ ಹಾಕುವಂತೆ ಒತ್ತಾಯಿಸಿದ್ದಾರೆ. tirupati laddu controversy
ನಾಯ್ಡು ಸಂಪೂರ್ಣ ಸುಳ್ಳುಗಾರ ಎಂದು ಬಣ್ಣಿಸಿರುವ ಜಗನ್ ಅವರು ಕೇವಲ ರಾಜಕೀಯ ಉದ್ದೇಶಗಳಿಗಾಗಿ ಕೋಟ್ಯಂತರ ಜನರ ನಂಬಿಕೆಯನ್ನು ಘಾಸಿಗೊಳಿಸಿದ್ದಾರೆ ಎಂದು ಹೇಳಿದ್ದಾರೆ.
ಇಡೀ ವಿಷಯದಲ್ಲಿ ಪ್ರಧಾನಿ ಮಧ್ಯಸ್ಥಿಕೆ ವಹಿಸಬೇಕು ಎಂದು ಆಗ್ರಹಿಸಿರುವ ಜಗನ್ ಸುಳ್ಳುಗಳನ್ನು ಹಬ್ಬಿಸುತ್ತಿರುವ ನಾಯ್ಡುಗೆ ವಾಗ್ದಂಡನೆ ಮಾಡುವಂತೆ ಕೇಳಿಕೊಂಡಿದ್ದಾರೆ.
ಶ್ರೀ ವೆಂಕಟೇಶ್ವರ ಸ್ವಾಮಿ ದೇಗುಲದ ತಿರುಮಲ ತಿರುಪತಿ ದೇವಸ್ಥಾನಂ ಸಮಿತಿ(ಟಿಟಿಡಿ) ನಲ್ಲಿ ತುಪ್ಪ ಸ್ವೀಕರಿಸುವ ಪ್ರಕ್ರಿಯೆಯನ್ನು ವಿವರಿಸುವ ಎಂಟು ಪುಟಗಳ ಪತ್ರ ಲಗತ್ತಿಸಿರುವ ಜಗನ್, ನಾಯ್ಡು ಅವರ ಕ್ರಮಗಳು ಸಿಎಂ ಸ್ಥಾನಕ್ಕೆ ಶೋಭೆ ತರುವುದಿಲ್ಲ. ಸಾರ್ವಜನಿಕ ಜೀವನದಲ್ಲಿ ಟಿಟಿಡಿ ಮತ್ತು ಅದರ ಆಚರಣೆಗಳ ಪಾವಿತ್ರ್ಯವನ್ನು ಸಹ ಕೆಡಿಸಿದೆ ಎಂದು ದೂರಿದ್ದಾರೆ.