

ಹೈದರಾಬಾದ್: ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ವೈಎಸ್‌ಆರ್‌ಸಿಪಿ ಮುಖ್ಯಸ್ಥ ಜಗನ್ ರೆಡ್ಡಿ ತಿರುಪತಿ ದೇವಸ್ಥಾನದ ಕಾಣಿಕೆಗೆ ಸಂಬಂಧಿಸಿದ ಸಂಪೂರ್ಣ ವಿವಾದವನ್ನು ಕಟ್ಟುಕಥೆ ಎಂದು ಕರೆದಿದ್ದಾರೆ.
ಇದು ಜನರ ಗಮನವನ್ನು ಬೇರೆಡೆ ಸೆಳೆಯುವ ಪ್ರಯತ್ನ. ಅಷ್ಟೇ ಅಲ್ಲ, ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ರಾಜಕೀಯ ಲಾಭಕ್ಕಾಗಿ ದೇವರನ್ನೂ ಬಳಸಿಕೊಳ್ಳುವ ವ್ಯಕ್ತಿ ಎಂದು ಹೇಳಿದ್ದಾರೆ.
ಚಂದ್ರಬಾಬು ನಾಯ್ಡು ಅವರು 100 ದಿನಗಳ ಆಡಳಿತದಿಂದ ಗಮನವನ್ನು ಬೇರೆಡೆ ಸೆಳೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ವಿರುದ್ಧ ವೈಎಸ್‌ಆರ್‌ಸಿಪಿ ಮುಖ್ಯಸ್ಥ ವೈ ಎಸ್ ಜಗನ್ ಮೋಹನ್ ರೆಡ್ಡಿ ವಾಗ್ದಾಳಿ ನಡೆಸಿದರು.
ಚಂದ್ರಬಾಬು ತಮ್ಮ 100 ದಿನಗಳ ಆಡಳಿತದಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಜಗನ್ ರೆಡ್ಡಿ, ನಾಯ್ಡು ಅವರ ನೂರು ದಿನಗಳ ಆಡಳಿತದ ಬಗ್ಗೆ ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅವರ ಸೂಪರ್ ಸಿಕ್ಸ್ (ಚುನಾವಣೆ ಭರವಸೆ) ಏನಾಯಿತು ಎಂದು ಅವರು ಕೇಳುತ್ತಿದ್ದಾರೆ. ಹೀಗಾಗಿ ಜನರ ಗಮನ ಬೇರೆಡೆ ಸೆಳೆಯಲು ಈ ಕಪೋಲಕಲ್ಪಿತ ಕಥೆಯನ್ನು ರಚಿಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.