Thursday, 15th November 2018  

Vijayavani

ಆ್ಯಂಬಿಡೆಂಟ್ ಕೋಟಿ ಕೋಟಿ ಡೀಲ್ ಪ್ರಕರಣ - ಕೆಲವೇ ಕ್ಷಣಗಳಲ್ಲಿ ಜಾಮೀನು ಅರ್ಜಿ ತೀರ್ಪು- ಬಿಡುಗಡೆಯಾಗ್ತಾರಾ ಗಣಿಧಣಿ..?        ನಾನು ಸಕ್ಕರೆ, ಮಾಧ್ಯಮಗಳು ಇರುವೆ - ನಾನು ಹೋದ್ಕಡೆ ನನ್ನನ್ನೇ ಹಿಂಬಾಲಿಸುತ್ತಾರೆ -  ಜಂಭ ಕೊಚ್ಚಿಕೊಂಡ ನಟಿ ಶ್ರುತಿ        ನಮ್ಮ ತಂದೆನೂ ಬ್ರಾಹ್ಮಣರನ್ನ ಸೋಲಿಸಿದ್ರು - ನಾನೂ ಈಗ ಬ್ರಾಹ್ಮಣರ ವ್ಯಕ್ತಿಯನ್ನು ಸೋಲಿಸಿದ್ದೇನೆ - ಸಿದ್ದು ನ್ಯಾಮಗೌಡ ಹೇಳಿಕೆ        ಮಹದಾಯಿ ನದಿ ನೀರು ಹಂಚಿಕೆ ವಿಚಾರ - ಇದೇ 17ರಂದು ಸರ್ವೆ ಪಕ್ಷ ಸಭೆ ಕರೆ ಸಿಎಂ- ಬಿಎಸ್​ವೈ, ದಿನೇಶ್​ ಗುಂಡೂರಾವ್​ಗೆ ಪತ್ರ        ರಫೇಲ್ ಖರೀದಿ ಅವ್ಯವಹಾರ ಆರೋಪ - ಸುದೀರ್ಘ 5 ಗಂಟೆಗಳ ಕಾಲ ನಡೆದ ವಿಚಾರಣೆ ಮುಕ್ತಾಯ - ತೀರ್ಪು ಕಾಯ್ದಿರಿಸಿದ ಸುಪ್ರೀಂ        ವೈಟ್​​ಹೌಸ್​​ನಲ್ಲಿ ದೀಪಾವಳಿ ಸಂಭ್ರಮ - ದೀಪ ಬೆಳಗಿ ಹಿಂದುಗಳಿಗೆ ಶುಭಕೋರಿದ ಟ್ರಂಪ್ - ಮೋದಿ ನನ್ನ ಸ್ನೇಹಿತ ಎಂದ ಟ್ರಂಪ್​       
Breaking News

ತಿರುಪತಿಯಲ್ಲಿ ಸಂಗ್ರಹವಾಗಿರುವ ಹಳೆ ನೋಟುಗಳ ಮೌಲ್ಯ ಎಷ್ಟು ಗೊತ್ತಾ?

Thursday, 15.03.2018, 8:20 AM       No Comments

ತಿರುಪತಿ: ತಿರುಮಲದಲ್ಲಿರುವ ಪ್ರಸಿದ್ಧ ವೆಂಕಟೇಶ್ವರ ದೇಗುಲದಲ್ಲಿ ನಿಷೇಧಿತ ಹಳೆ ನೋಟುಗಳು ಸಂಗ್ರಹವಾಗಿದ್ದು, ಅವುಗಳ ಒಟ್ಟಾರೆ ಮೌಲ್ಯ ಸುಮಾರು 25 ಕೋಟಿ ರೂಪಾಯಿ ಎಂದು ದೇವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ

ನಿಷೇಧಗೊಂಡಿರುವ 500 ಮತ್ತು 1000 ಮುಖಬೆಲೆಯ ನೋಟುಗಳನ್ನು ಒಂದು ಲಕ್ಷಕ್ಕೂ ಅಧಿಕ ಮಂದಿ ಕಾಣಿಕೆ ರೂಪದಲ್ಲಿ ಹುಂಡಿಗೆ ಹಾಕಿದ್ದಾರೆ. 2016ರ ನವೆಂಬರ್‌ 8 ರಂದು ನೋಟು ನಿಷೇಧಗೊಂಡ ಕೆಲವೇ ದಿನಗಳಲ್ಲಿ ಹುಂಡಿಯಲ್ಲಿ ಹಳೆ ನೋಟುಗಳು ಸಂಗ್ರಹವಾಗಿವೆ.

ಟಿಟಿಡಿ(ತಿರುಮಲ ತಿರುಪತಿ ದೇವಸ್ತಾನಂ) ಭಕ್ತರ ಅರ್ಪಣಾ ಭಾವನೆಯನ್ನು ಮನಸ್ಸಿನಲ್ಲಿಟ್ಟುಕೊಂಡು ಹಳೆ ನೋಟುಗಳ ಬದಲಾವಣೆಗಾಗಿ ಆರ್‌ಬಿಐಗೆ ಪತ್ರ ಬರೆಯಲಾಗಿದೆ ಎಂದು ಟಿಟಿಡಿಯ ಹೆಚ್ಚುವರಿ ಹಣಕಾಸು ಸಲಹೆಗಾರ ಒ ಬಾಲಾಜಿ ತಿಳಿಸಿದ್ದಾರೆ.

ಸದ್ಯಕ್ಕೆ ಆರ್‌ಬಿಐ ನಿಂದ ಉತ್ತರವನ್ನು ನಿರೀಕ್ಷಿಸುತ್ತಿದ್ದು, ಹಳೆ ನೋಟುಗಳು ದೇವಾಲಯದಲ್ಲಿಯೇ ಸುರಕ್ಷಿತವಾಗಿ ದಾಸ್ತಾನು ಮಾಡಲಾಗಿದೆ ಎಂದು ಹೇಳಿದ್ದಾರೆ. (ಏಜೆನ್ಸೀಸ್)

Leave a Reply

Your email address will not be published. Required fields are marked *

Back To Top